ಕೋವಿಡ್ ಚಿಕಿತ್ಸೆಗೆ ವಿಕ್ರಂ ಆಸ್ಪತ್ರೆ ದುರಸ್ತಿ
Team Udayavani, Jul 9, 2020, 5:11 AM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ ಕೆಲ ವರ್ಷದಿಂದ ಸೇವೆ ಸ್ಥಗಿತಗೊಳಿಸಿದ್ದ ವಿಕ್ರಂ ಜೇಷ್ಠ ಖಾಸಗಿ ಆಸ್ಪತ್ರೆಯನ್ನು ಕೋವಿಡ್ ಚಿಕಿತ್ಸೆಗೆ ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯ 200 ಹಾಸಿಗೆಗಳೂ ಭರ್ತಿಯಾಗಿದ್ದು, ಈಗಾಗಲೇ ಇಎಸ್ಐ ಆಸ್ಪತ್ರೆ, ಮಂಡಕಳ್ಳಿ ಬಳಿಯ ರಾಜ್ಯ ಮುಕ್ತ ವಿವಿ (ಕೆಎಸ್ ಓಯು)ದ ವಿಸ್ತರಣಾಕಟ್ಟಡವನ್ನು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಿದೆ.
ಪ್ರತಿನಿತ್ಯ ಸರಾಸರಿ 50 ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗುತ್ತಿದ್ದು, ಜೊತೆಗೆ ಹಲವು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯಲ್ಲೂ ಸೋಂಕು ದೃಢಪಡುತ್ತಿರುವ ಕಾರಣ ಅವರ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವ ಸಿಬ್ಬಂದಿಗೂ ಪಾಸಿಟಿವ್ ಬರುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ, ಕೆಲ ಖಾಸಗಿ ಆಸ್ಪತ್ರೆಗಳನ್ನು ಚಿಕಿತ್ಸೆಗಾಗಿ ಬಳಸಿಕೊಳ್ಳಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಕೆಲ ವರ್ಷದಿಂದ ಸ್ಥಗಿತಗೊಂಡಿರುವ “ವಿಕ್ರಂ ಜೇಷ್ಠ ಆಸ್ಪತ್ರೆ’ಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದು, ಆಸ್ಪತ್ರೆಯ ನೆಲಮಹಡಿ ಸೇರಿ 5 ಮಹಡಿಯನ್ನು ಸ್ವತ್ಛಗೊಳಿಸುತ್ತಿದೆ. 100 ಹಾಸಿಗೆ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯನ್ನು ಮುಡಾ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿರ್ (ಎಲೆಕ್ಟ್ರಿಕಲ…) ಹಾಗೂ ಇಬ್ಬರು ಜೂನಿಯರ್ ಎಂಜಿನಿಯರ್ಗಳು ಸೇರಿ 50 ಕೆಲಸಗಾರರಿಂದ ಸ್ವತ್ಛತೆ ಹಾಗೂ ರಿಪೇರಿ ಕೆಲಸ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.