ಜನಪ್ರತಿನಿಧಿಗಳೊಂದಿಗೆ ಸಿಎಂ ಸಭೆ
Team Udayavani, Jul 9, 2020, 5:28 AM IST
ಬೆಂಗಳೂರು: ರಾಜಧಾನಿಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ಬಗ್ಗೆ ಜಾಗೃತಿ ಹಾಗೂ ನಿಯಂತ್ರಣ ಕಾರ್ಯಕ್ಕೆ ನಗರದ ಜನಪ್ರನಿಧಿಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.
ಅದರಂತೆ ಶುಕ್ರವಾರ ಬೆಳಗ್ಗೆ 11.30ಕ್ಕೆ ಅರಮನೆ ಮೈದಾನದ ವೈಟ್ ಪೆಟಲ್ಸ್ ಆವರಣದಲ್ಲಿ ನಗರದ ಎಲ್ಲ ಸಚಿವರು, ಸಂಸದರು, ಎಲ್ಲ ಪಕ್ಷಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರ ಸಭೆ ಕರೆದಿರುವ ಯಡಿಯೂರಪ್ಪ ಅವರು ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.
ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಸಚಿವರಾದ ಬಿ.ಶ್ರೀರಾಮುಲು, ಡಾ.ಕೆ.ಸುಧಾಕರ್ ಅವರೊಂದಿಗೆ “ಕಾವೇರಿ’ ನಿವಾಸದಲ್ಲಿ ಬುಧವಾರ ರಾತ್ರಿ ಸಭೆ ನಡೆಸಿದ ಯಡಿಯೂರಪ್ಪ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ಪಾಲಿಕೆ ಸದಸ್ಯರು ವಾರ್ಡ್ ಮಟ್ಟದಲ್ಲಿ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುತ್ತಾರೆ.
ಇದರಿಂದ ಸೋಂಕು ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸೋಂಕಿತರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸುವ ಕಾರ್ಯದಲ್ಲಿ ಅವರನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬಹುದು. ಆ ಮೂಲಕ ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಬಹುದಾಗಿದೆ. ಹಾಗಾಗಿ ಈ ಬಗ್ಗೆ ಪಾಲಿಕೆ ಸದಸ್ಯರು, ಶಾಸಕರೊಂದಿಗೆ ಚರ್ಚಿಸಿ ಎಲ್ಲರನ್ನು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿ ಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.