ಬಡವರ ಬಂಧು ಫಲಾನುಭವಿಗಳ ದ್ವಿಗುಣಕ್ಕೆ ನಿರ್ಧಾರ
Team Udayavani, Jul 9, 2020, 7:07 AM IST
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಜಾರಿಗೆ ಬಂದಿರುವ ಬಡವರ ಬಂಧು ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು ಫಲಾನುಭವಿಗಳನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಫಲಾನುಭವಿಗಳನ್ನು ಗುರುತಿಸುವ ಜವಾಬ್ದಾರಿಯನ್ನು ಸರ್ಕಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲು ಜಿಲ್ಲಾಧಿಕಾರಿಗಳಿಗೆ ವಹಿಸಿದೆ.
ಸ್ಥಳೀಯ ವ್ಯಾಪಾರಿಗಳ ಬಡ್ಡಿ ಹಾವಳಿಯಿಂದ ತಪ್ಪಿಸಲು ರಾಜ್ಯ ಸರ್ಕಾರ ನಗರ ಮತ್ತು ಗ್ರಾಮೀಣ ಪ್ರದೇಶದ ಸಣ್ಣ ಬೀದಿ ವ್ಯಾಪಾರಿಗಳಿಗೆ ಡಿಸಿಸಿ ಬ್ಯಾಂಕ್, ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಮಹಿಳಾ ಸಹಕಾರ ಬ್ಯಾಂಕ್‌ಗಳ ಮೂಲಕ ಕಿರು ಸಾಲ ನೀಡುವ ಉದ್ದೇಶದಿಂದ 2018 ರ ನವೆಂಬರ್‌ನಲ್ಲಿ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಗೆ ಸಾಕಷ್ಟು ಬೇಡಿಕೆ ಇದ್ದರೂ, ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಆಡಳಿತಗಳಿಂದ ಗುರುತಿನ ಚೀಟಿ ನೀಡದೇ ಇರುವುದರಿಂದ ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.
ಹೀಗಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಿಜವಾದ ಫಲಾನುಭವಿಗಳಿಗೆ ದೊರೆಯದೇ ವಿಫಲವಾಗುತ್ತಿರುವುದರಿಂದ ಅರ್ಹ ಫಲಾನು ಭವಿಗಳನ್ನು ಗುರುತಿಸಿ ಸ್ಥಳೀಯ ಸಂಸ್ಥೆಗಳ ಮೂಲಕ ಗುರುತಿನ ಚೀಟಿ ನೀಡಿ ಸಾಲ ದೊರೆ ಯುವಂತೆ ಮಾಡಲು ಸರ್ಕಾರ ಯೋಜ ನೆಯ ಅನುಷ್ಠಾನ ಸಮಿತಿಯನ್ನು ಪರಿಕ್ಷರಣೆ ಮಾಡಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಈ ಯೋಜನೆ ಹೆಚ್ಚಿನ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಯೋಜನೆ ಅನುಷ್ಠಾನದಲ್ಲಿ ಬದಲಾವಣೆ ಮಾಡಿದ್ದು,
ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಅಧ್ಯಕ್ಷತೆಯ ಸಮಿತಿ ಬದಲಾಯಿಸಿ, ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಸ್ಥಳೀಯ ನಗರಸಭೆ ಆಯುಕ್ತರು ಹಾಗೂ ಬೀದಿ ವ್ಯಾಪಾರಿಗಳ ಒಕ್ಕೂಟದ ಒಬ್ಬ ಸದಸ್ಯರನ್ನು ಸಮಿತಿಗೆ ಸದಸ್ಯರನ್ನಾಗಿ ಹೆಚ್ಚುವಾಗಿ ನೇಮಿಸಲಾಗಿದೆ.
ಸಾಲ ದ್ವಿಗುಣ ಗುರಿ: 2018 ರಲ್ಲಿ ಆರಂಭವಾದ ಬಡವರ ಬಂಧು ಯೋಜನೆಯಡಿ ಕಳೆದ ವರ್ಷ 22 ಸಾವಿರ ಫಲಾನುಭವವಿಗಳಿಗೆ ಸುಮಾರು 14 ಕೋಟಿ ರೂ. ವಿತರಿಸಲಾಗಿದೆ. ಯೋಜನೆ ಅಡಿಯಲ್ಲಿ ಬೀದಿಬದಿ ಹಾಗೂ ಸಣ್ಣ ವ್ಯಾಪಾರಿಗಳಿಗೆ ಅವರ ವ್ಯಾಪಾರದ ಅನುಗುಣವಾಗಿ ಕನಿಷ್ಠ 2 ಸಾವಿರದಿಂದ 10 ಸಾವಿರದವರೆಗೆ ಸಾಲ ನೀಡಲಾಗುತ್ತಿದೆ.
ಫಲಾನುಭವಿಗಳಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ವಿತರಿಸ ಲಾಗುತ್ತಿದ್ದು, ಸಾಲ ಮರುಪಾವತಿಗೆ 3 ತಿಂಗಳು ಸಮಯಾವಕಾಶ ನೀಡಲಾಗುತ್ತಿದೆ. ಸಾಲ ಪಡೆಯಲು ಫಲಾನುಭವಿಗಳು ಶೂನ್ಯ ಠೇವಣಿಯಲ್ಲಿ ಖಾತೆ ತೆರಯಬಹುದು. ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿಸುವ ಫಲಾನುಭವಿಗಳಿಗೆ ಶೇ.10 ರಷ್ಟು ಹೆಚ್ಚಳ ಮಾಡಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ಸಾಲದ ಮೇಲಿನ ಬಡ್ಡಿ ಹಣ ನೀಡಲು 1.10 ಕೋಟಿ ರೂ. ಅನ್ನು ಸರ್ಕಾರ ಬಜೆಟ್‌ನಲ್ಲಿ ತೆರೆದಿಟ್ಟಿದೆ.
ಸಾಲ ಪಡೆಯಲು ಮಾಡಬೇಕಿರುವುದು: ಫಲಾನುಭವಿಗಳು ಸಾಲ ಪಡೆಯಲು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಹಾಗೂ ತಾವು ವ್ಯಾಪಾರ ನಡೆಸುತ್ತಿರುವ ಸ್ಥಳದ ಫೋಟೋ ಮತ್ತು ಸ್ಥಳೀಯ ಸಂಸ್ಥೆಗಳು ನೀಡಿರುವ ಗುರುತಿನ ಚೀಟಿಯನ್ನು ಸಹಕಾರಿ ಬ್ಯಾಂಕ್ ನಿಗದಿ ಪಡಿಸಿದ ಅರ್ಜಿ ನಮೂನೆಯಲ್ಲಿ ಸಂಬಂಧಿಸಿದ ಬ್ಯಾಂಕ್‌ನಲ್ಲಿ ಸಲ್ಲಿಸಲು ಸೂಚಿಸಲಾಗಿದೆ.
ಬಡವರ ಬಂಧು ಯೋಜನೆಗೆ ಬೀದಿ ಬದಿ ವ್ಯಾಪಾರಿಗಳಿಂದ ಹೆಚ್ಚಿನ ಬೇಡಿಕೆ ಇದೆ. ಆದರೆ, ಅವರಿಗೆ ಗುರುತಿನ ಚೀಟಿ ಇಲ್ಲದೆ ಸಹಕಾರ ಬ್ಯಾಂಕ್‌ಗಳು ಸಾಲ ನೀಡಲು ಹಿಂದೇಟು ಹಾಕುತ್ತಿವೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಮೂಲಕ ಗುರುತಿನ ಚೀಟಿ ನೀಡುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.
-ಶಿವಪ್ರಕಾಶ್, ಸಹಕಾರ ಸಂಘಗಳ ಅಪರ ನಿಬಂಧಕರು
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.