![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 9, 2020, 11:19 AM IST
ಸ್ಯಾಕ್ರೆಮೆಂಟೋ: ಸೋಂಕು ಭೀತಿ ಹಿನ್ನೆಲೆಯಲ್ಲಿ ಜನ ಸಂಚಾರ ವಿರಳವಾಗಿದೆ.
ಲಾಸ್‌ಏಂಜಲೀಸ್ : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 10,000 ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಹಿಂದೆದಿಗಿಂತ ಅತೀ ಹೆಚ್ಚು ದೈನಂದಿನ ಪ್ರಕರಣಗಳು ದಾಖಲೆಯಾಗಿದೆ. ಕಳೆದ ವಾರದಿಂದ ಅಮೆರಿಕದಲ್ಲಿ ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಲೇ ಇದ್ದು, ಸೋಂಕು ಪೀಡಿತ ರಾಜ್ಯಗಳಲ್ಲಿ ಕ್ಯಾಲಿಫೋರ್ನಿಯಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ತ್ವರಿತವಾಗಿ ಸೋಂಕು ಮೂಲ ಪತ್ತೆ ಮತ್ತು ಪರಿಣಾಮಕಾರಿ ಚಿಕಿತ್ಸೆ ನಡೆಸಲು ರಾಜ್ಯ ಸರಕಾರ ನೇಮಿಸಿದ ಕಾಂಟ್ಯಾಕ್ಟ್ ಟ್ರೇಸರ್ ತಂಡ ನಿರೀಕ್ಷಿಸಲಾಗಿದ್ದ ಪ್ರಕರಣಗಳಿಗಿಂತ ಅತೀ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ದೇಶದಲ್ಲಿ ಕೈ ಮೀರುತ್ತಿರುವ ಸೋಂಕು ನಿಯಂತ್ರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲರಾಗಿದ್ದಾರೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ. ಅಲ್ಲದೇ ಸೋಂಕು ಪ್ರಮಾಣ ಏರಿಕೆಯಾಗುತ್ತಿದ್ದರೂ ರಾಜ್ಯದ್ಯಾಂತ ಜಾರಿ ಇರುವ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸುತ್ತಿರುವ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿದೆ. ಇನ್ನು ಮಂಗಳವಾರ ವರದಿಯಾಗಿರುವ 10,201 ಹೊಸ ಪ್ರಕರಣಗಳ ಮೂಲಕ ಕ್ಯಾಲಿಫೋರ್ನಿಯಾದಲ್ಲಿ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 117,000 ಕ್ಕೆ ಏರಿದೆ. ಇನ್ನು ಜೂನ್ ಒಂದು ತಿಂಗಳಲೇ 284,00 ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಪ್ರಮಾಣ ದ್ವಿಗುಣಗೊಂಡಿದೆ. ಇದೇ ವೇಳೆ ಅಮೆರಿಕದಲ್ಲಿ ಒಟ್ಟ ಸೋಂಕಿತರ ಪ್ರಮಾಣ 30 ಲಕ್ಷದ ಗಡಿ ದಾಟಿದೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.