ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ 10ನೇ ಬಲಿ
Team Udayavani, Jul 9, 2020, 11:43 AM IST
ಬಾಗಲಕೋಟೆ: ಮಹಾಮಾರಿ ಕೋವಿಡ್-19 ಸೋಂಕಿಗೆ ಗುರುವಾರ ಜಿಲ್ಲೆಯಲ್ಲಿ ಮತ್ತೊಬ್ಬ ವೃದ್ಧ ಬಲಿಯಾಗಿದ್ದು, ಸೋಂಕಿನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಬನಹಟ್ಟಿಯ 65 ವರ್ಷದ ವೃದ್ದ ಪಿ- 10165 (ಬಿಜಿಕೆ-145) ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ.
ಮೃತ ವೃದ್ಧ ಮಹಾರಾಷ್ಟ್ರದಿಂದ ಆಗಮಿಸಿದ್ದ. ಆತನಿಗೆ 15 ದಿನಗಳ ಹಿಂದೆ ಕೋವಿಡ್-19 ಸೋಂಕು ದೃಢವಾಗಿತ್ತು. ಈ ವೃದ್ಧನ ಕುಟುಂಬದ ಇತರೇ ಐದು ಜನರಿಗೂ ಸೋಂಕು ತಗುಲಿದ್ದು, ಎಲ್ಲರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೃದ್ಧನಿಗೆ ಕೋವಿಡ್ ಸೋಂಕಿನ ಜೊತೆಗೆ ಕಿಡ್ನಿ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಗುರುವಾರ ನಸುಕಿನ ಜಾವ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಇದುವರೆಗೆ 10 ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಓರ್ವ ವೈದ್ಯ ಬೆಂಗಳೂರಿನಲ್ಲಿ, ಮತ್ತೋರ್ವ ವೃದ್ಧೆ ವಿಜಯಪುರದಲ್ಲಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು
Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.