ಎಲ್ಲ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಲು ಒತ್ತಾಯ
Team Udayavani, Jul 9, 2020, 4:14 PM IST
ಹಾವೇರಿ: ಎಸ್‌ಎಫ್‌ಐ ಪದಾ ಧಿಕಾರಿಗಳು ತಹಶೀಲ್ದಾರ್ ಶಂಕರ ಜಿ.ಎಸ್. ಅವರಿಗೆ ಮನವಿ ಸಲ್ಲಿಸಿದರು.
ಹಾವೇರಿ: ಕೊರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಗ್ರಿ, ಪಿಜಿ, ಇಂಜಿನಿಯರಿಂಗ್, ಡಿಪ್ಲೋಮಾ, ಕಾನೂನು ಸೇರಿದಂತೆ ಎಲ್ಲ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ತಹಶೀಲ್ದಾರ್ ಶಂಕರ ಜಿ.ಎಸ್. ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಆರು ತಿಂಗಳ ಕಾಲ ಮನ್ನಾ ಮಾಡಬೇಕು. ಆನ್‌ಲೈನ್ ಶಿಕ್ಷಣ ಕಡ್ಡಾಯ ಸರಿಯಾದ ಕ್ರಮವಲ್ಲ. ಪೋಷಕರಿಂದ ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿನ 12 ತರಗತಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಪ್ರತಿ ತಿಂಗಳು 10 ಅಕ್ಕಿ ಹಾಗೂ ಅಗತ್ಯ ಆಹಾರ ಪದಾರ್ಥಗಳನ್ನು 6 ತಿಂಗಳು ಕಾಲ ವಿದ್ಯಾರ್ಥಿಗಳ ಮನೆಗೆ ತಲುಪಿಸಬೇಕು ಎಂದು
ಮನವಿ ಮಾಡಿದರು.
ವೈದ್ಯಕೀಯ ವಿದ್ಯಾರ್ಥಿಗಳಿಗೆ 16ತಿಂಗಳಿಂದ ಬಾಕಿ ಉಳಿಸಿರುವ ಶಿಷ್ಯವೇತನ ಕೂಡಲೇ ಬಿಡುಗಡೆಗೊಳಿಸಿ ಫೆಲೋಶಿಪ್, ಸ್ಕಾಲರ್ಶಿಪ್, ಶೈಕ್ಷಣಿಕ ಆರ್ಥಿಕ ನೆರವುಗಳನ್ನು ವಿದ್ಯಾರ್ಥಿಗಳಿಗೆ ತಲುಪಲು ಸರ್ಕಾರ ಹಾಗೂ ವಿಶ್ವ ವಿದ್ಯಾಲಯಗಳು ಕ್ರಮ ಕೈಗೊಳ್ಳಬೇಕು. ಲಾಕ್‌ಡೌನ್ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗಳ ಕುಟುಂಬ ನಿರ್ವಹಣೆಗಾಗಿ ಆರು ತಿಂಗಳ ಕಾಲ 7500 ರೂ. ನೀಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು
ಮತ್ತು ಅತಿಥಿ ಉಪನ್ಯಾಸಕರು ಹಾಗೂ ಕಾರ್ಮಿಕರಿಗೆ ಬಾಕಿ ಸಂಬಳ ಬಿಡುಗಡೆ ಮಾಡಬೇಕು ಎಂದು ವಿನಂತಿಸಿದರು.
ದೇಶಾದ್ಯಂತ ಯುವತಿಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೋವಿಡ್-19 ಪರೀಕ್ಷೆ ಉಚಿತವಾಗಿ ಮಾಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ದರ ನಿಗದಿ ಮಾಡಿರುವುದು ಖಂಡನೀಯ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋ ಧಿಸಿ ಮತ್ತು ಪೆಟ್ರೋಲ್-ಡೀಸೆಲ್ ಗ್ಯಾಸ್‌ಗಳನ್ನು ಜಿಎಸ್‌ಟಿ ಪರಿ ಯೊಳಗೆ ತರುವಂತಾಗಬೇಕು. ಉದ್ಯೋಗ ಸೃಷ್ಟಿಗೆ ಅವಕಾಶ ನೀಡಬೇಕು. ಹೊಸ ಶಿಕ್ಷಣ ನೀತಿ-2019 ಜಾರಿಯಿಂದಾಗುವ ಶಿಕ್ಷಣದ ಖಾಸಗೀಕರಣ ಮತ್ತು ಕೇಸರೀಕರಣದ ಅಪಾಯಕಾರಿ ಅಂಶ ಅರಿತು ತಡೆಯುವ ಕೆಲಸ ಸರ್ಕಾರ ಮಾಡಲು ಮುಂದಾಗಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ, ಪ್ರಸನ್ನ ಕಡಕೋಳ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.