ಬಂಟ್ವಾಳ: ಒಂದೇ ದಿನ 20ಕ್ಕೂ ಅಧಿಕ ಕೋವಿಡ್-19 ಸೋಂಕು ಪ್ರಕರಣ
Team Udayavani, Jul 9, 2020, 5:05 PM IST
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕೋವಿಡ್ ಸ್ಪೋಟಗೊಂಡಿದ್ದು, 20ಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲೇ ಇಂದು ಆರು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಳಿದಂತೆ ಗ್ರಾಮೀಣ ಭಾಗಗಳಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.
ಜಿಲ್ಲೆಗೆ ಕೋವಿಡ್ ಸೋಂಕು ಕಾಲಿಟ್ಟ ಆರಂಭದಲ್ಲಿ ಬಂಟ್ವಾಳದಲ್ಲಿ ಸೋಂಕು ಪ್ರಕರಣಗಳು ಕಂಡುಬಂದಿತ್ತು. ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ನಂತರ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಬಂಟ್ವಾಳ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿದೆ. ಜು. 7ರಂದು 10ಕ್ಕೂ ಅಧಿಕ ಪ್ರಕರಣಗಳು, ಜು. 8ರಂದು 12 ಪ್ರಕರಣಗಳು ಕಂಡುಬಂದಿತ್ತು.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಬುಧವಾರ ಜಿಲ್ಲೆಯಲ್ಲಿ 183 ಮಂದಿಗೆ ಸೋಂಕು ದೃಢವಾಗಿದ್ದರೆ, ಇಂದು ಮತ್ತೆ 168 ಜನರಿಗೆ ಸೋಂಕು ತಾಗಿದ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.