“ನಡಿಪಟ್ಣ ಕ್ಕೆ 1 ಕೋ.ರೂ. ವೆಚ್ಚದ ಶಾಶ್ವತ ತಡೆಗೋಡೆ’


Team Udayavani, Jul 10, 2020, 5:13 AM IST

“ನಡಿಪಟ್ಣ ಕ್ಕೆ 1 ಕೋ.ರೂ. ವೆಚ್ಚದ ಶಾಶ್ವತ ತಡೆಗೋಡೆ’

ಪಡುಬಿದ್ರಿ: ನಡಿಪಟ್ಣದ ಲೋಕೇಶ್‌ ಕರ್ಕೇರ ಮನೆ ಬಳಿಯಿಂದ ಮಹೇಶ್ವರಿ ಡಿಸ್ಕೋ ಫಂಡ್‌ ಚಪ್ಪರದ ವರೆಗಿನ 130 ಮೀ. ಉದ್ದಕ್ಕೆ 1 ಕೋ.ರೂ. ವೆಚ್ಚದಲ್ಲಿ ಶಾಶ್ವತ ತಡೆಗೋಡೆ ರಚನೆಗೆ ಬಂದರು, ಮೀನುಗಾರಿಕೆ ಇಲಾಖಾ ಮಂಜೂರಾತಿ ದೊರೆತಿದೆ ಎಂದು ಕಾಪು ಶಾಸಕ ಲಾಲಾಜಿ ಮೆಂಡನ್‌ ಹೇಳಿದರು.

ಅವರು ಜು.9ರಂದು ಪಡುಬಿದ್ರಿ ನಡಿಪಟ್ಣ ಪ್ರದೇಶದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸಮುದ್ರಕೊರೆತ ತಡೆ ಕಾಮಗಾರಿ ಕುರಿತು ಮಾಹಿತಿ ನೀಡಿದರು.

ಕೈರಂಪಣಿ ಫಂಡ್‌ಗಳ ಸ್ಥಳೀಯ ಮೀನುಗಾರರಿಗೆ ಸಮುದ್ರಕ್ಕಿಳಿಯಲು ಬೇಕಾದ ನಿರ್ದಿಷ್ಟ ಪ್ರದೇಶಗಳ ತೆರವು ಬಿಟ್ಟು ಉಳಿದಂತೆ ಇಲ್ಲಿನ 130 ಮೀ. ಪ್ರದೇಶ ವನ್ನು ಶಾಶ್ವತ ತಡೆಗೋಡೆ ನಿರ್ಮಾ ಣದ ಮೂಲಕ ರಕ್ಷಿಸಲಾಗುವುದು. ಈ ಎಲ್ಲ ಮಾಹಿತಿಗಳನ್ನು ಜಿಲ್ಲಾಧಿಕಾರಿ ಅವ ರೊಂದಿಗೆ ನಿನ್ನೆಯಷ್ಟೇ ಚರ್ಚಿಸಲಾಗಿದೆ.

ಮಳೆಗಾಲದಲ್ಲಿ ಸ್ಥಳೀಯರ ಮನೆ, ತೋಟ ರಕ್ಷಿಸಿಕೊಳ್ಳಲು ತುರ್ತು ತಡೆಗೋಡೆ ಕಾಮಗಾರಿ ನಡೆಸಲಾಗುತ್ತಿದೆ. ಮಳೆಗಾಲದ ಬಳಿಕ ಶಾಶ್ವತ ಕಾಮಗಾರಿ ನಡೆಸುತ್ತೇವೆ ಎಂದರು.

ಸ್ಥಳೀಯರು ಹೆಜಮಾಡಿಯಿಂದ ಪಡುಬಿದ್ರಿಯ ಭಾಗಕ್ಕೆ ಸಂಪರ್ಕ ಸೇತುವೆಯ ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಶಾಸಕ ಲಾಲಾಜಿ ಅವರಲ್ಲಿ ಮನವಿ ಮಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಿದರು. ಬ್ಲೂ ಫ್ಲ್ಯಾಗ್ ಬೀಚ್‌ಗೆ ಕೇಂದ್ರ ತಂಡದ ಅನುಮೋದನೆ ದೊರೆತ ಬಳಿಕ ಈ ಸೇತುವೆ ಕುರಿತಾದ ಯೋಜನಾ ಪ್ರಸ್ತಾವವನ್ನು ಸರಕಾರಕ್ಕೆ ರವಾನಿಸಲಾಗುವುದು. ಇದರ ಜತೆಗೆ ಈ ಪ್ರದೇಶದ ಅಭಿವೃದ್ಧಿ ನಡೆಸಲಾಗುವುದು. ಈಗಾಗಲೇ ಶಾಸಕರ ನಿಧಿಯಿಂದ 1 ಕೋ.ರೂ.ಗಳ ನಡಿಪಟ್ಣ – ಬ್ಲೂಫ್ಲ್ಯಾಗ್ ಬೀಚ್‌ ಸಂಪರ್ಕ ರಸ್ತೆಯನ್ನೂ ಈ ಭಾಗಕ್ಕೆ ನೀಡಲಾಗಿದೆ ಎಂದ‌ರು.

ಶಾಸಕರ ಜತೆಗೆ ಮೀನುಗಾರಿಕೆ ಇಲಾಖಾ ಸಹಾಯಕ ಕಾರ್ಯಕಾರಿ ಎಂಜಿನಿಯರ್‌ ಉದಯ ಕುಮಾರ್‌, ಸಹಾಯಕ ಎಂಜಿನಿಯರ್‌ ಜಯರಾಜ್‌, ಜಿ. ಪಂ. ಸದಸ್ಯ ಶಶಿಕಾಂತ್‌ ಪಡುಬಿದ್ರಿ, ಮಾಜಿ ಉಡುಪಿ ತಾ. ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಮಾಜಿ ಗ್ರಾ. ಪಂ. ಸದಸ್ಯ ಅಶೋಕ್‌ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.