ಕೊಡಂಬೆಟ್ಟು : ಆಶಾ ಕಾರ್ಯಕರ್ತೆಗೆ ಹಲ್ಲೆ
Team Udayavani, Jul 10, 2020, 7:43 AM IST
ಹಲ್ಲೆಗೊಳಗಾದ ಮಮತಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪುಂಜಾಲಕಟ್ಟೆ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ನಡೆದಿದೆ. ಸ್ಥಳೀಯರಾದ ಸಂದೇಶ್ ಗಟ್ಟಿ ಅವರ ಪತ್ನಿ, ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರ ಮೇಲೆ ಸ್ಥಳೀಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ (60) ಹಲ್ಲೆ ನಡೆಸಿದ್ದಾರೆ. ಮಧ್ಯಾಹ್ನದ ವೇಳೆಗೆ ಮಮತಾ ಕರ್ತವ್ಯ ನಿಮಿತ್ತ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಏಕಾಏಕಿ ದೊಣ್ಣೆ ಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಮಮತಾ ಅವರ ತಲೆಗೆ, ಕೈಗೆ ಗಾಯವಾಗಿದೆ. ಅವರನ್ನು ವಾಮದಪದವು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.