ಕೋವಿಡ್ ಸೋಂಕಿಗೆ ತಡೆ; ಕಜಕಿಸ್ಥಾನಕ್ಕೆ ವಿಶ್ವಾಸ
ವೈದ್ಯಕೀಯ ವಲಯದಿಂದ ಯಶಸ್ವಿ ನಿರ್ವಹಣೆ
Team Udayavani, Jul 10, 2020, 9:10 AM IST
ನೂರ್ ಸುಲ್ತಾನ್: ರಾಜಧಾನಿಯ ಮಾರುಕಟ್ಟೆಯೊಂದರ ಎದುರು ನಿಂತ ಗ್ರಾಹಕರು.
ಅಸ್ತಾನಾ : ಚೀನ ಹರಡಿದ್ದ ಕೋವಿಡ್ ವೈರಸ್ ನಿಂದ ಇಡೀ ಜಗತ್ತಿನ ಆರ್ಥಿಕತೆಯೇ ತತ್ತರಿಸಿ ಕುಸಿತದ ದವಡೆಗೆ ಸಿಲುಕಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಆರ್ಥಿಕ ಹಿಂಜರಿತದ ಜತೆಗೆ ಏತ್ಮನಧ್ಯೆ ಎದುರಾಗಿರುವ ಸೋಂಕಿನಿಂದಾಗಿ ಸಾಮಾಜಿಕ ಅಭದ್ರತೆಯೂ ಕಾಡುತ್ತಿದೆ. ಅದರಲ್ಲಂತೂ ಹಿಂದುಳಿದ ದೇಶಗಳ ಪರಿಸ್ಥಿತಿ ಈ ಸಾಂಕ್ರಾಮಿಕ ಪಿಡುಗಿನಿಂದ ಮತ್ತಷ್ಟು ಹೀನಾಯವಾಗಿದ್ದು, ಸೋಂಕು ಬಿಕ್ಕಟ್ಟನ್ನು ನಿರ್ವಹಿಸಲು ಅಗತ್ಯ ಇರುವ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕೋವಿಡ್-19 ಬಿಕ್ಕಟ್ಟಿನಿಂದ ಹಣ ದುಬ್ಬರ, ನಷ್ಟ, ಉದ್ಯೋಗ ಸೇರಿದಂತೆ ನಾನಾ ಸಮಸ್ಯೆಗಳ ಸಿಲುಕಿ ಪರದಾಡುತ್ತಿರುವ ಈ ಪರಿಸ್ಥಿತಿ ನಡುವೆಯೇ ಕಜಕಿಸ್ಥಾನ ದೇಶ ಮಾತ್ರ ಬಿಕ್ಕಟ್ಟನ್ನು ಎದುರಿಸಲು ನಾವು ಸಮರ್ಥರಾಗಿದ್ದೇವೆ ಎಂಬ ವಿಶ್ವಾಸವನ್ನು ಹೊಂದಿದೆ.
ಪರಿಣಾಮಕಾರಿ ನಿರ್ವಹಣೆ
ಹಲವು ದೇಶಗಳಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಚಿಕಿತ್ಸೆಗೆ ನಿರ್ದಿಷ್ಟ ಸವಲತ್ತುಗಳಿಲ್ಲದೇ ಆರೋಗ್ಯ ವ್ಯವಸ್ಥೆ ಕೆಟ್ಟದಾಗಿದೆ. ಕೊರೊನಾ ಪ್ರಾರಂಭವಾದಗಿನಿಂದ ಈ ಮಾತುಗಳು ಕೇಳಿ ಬರುತ್ತಲೇ ಇವೆ. ಆದರೆ ಕಜಕಿಸ್ಥಾನದ ಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದ್ದು, ವಾಸ್ತವದ ಸ್ಥಿತಿ ಬೇರೆಯೇ ಇದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಧೃತಿಗೆೆಡದ ಕಝಕಿಸ್ತಾನದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದು, ವ್ಯವಸ್ಥಿತವಾಗಿ ಚಿಕಿತ್ಸೆ ಮತ್ತು ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದೆ. ಸರಾಸರಿ 1ಲಕ್ಷ ಜನರಲ್ಲಿ 90 ಸಾವಿರ ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸುತ್ತಿದ್ದು, ತ್ವರಿತವಾಗಿ ಸೋಂಕು ಮೂಲ ಪತ್ತೆ ಮಾಡುವಲ್ಲಿ ಅಗತ್ಯವಿರುವ ಕ್ರಮಗಳನ್ನು ದೇಶ ಜಾರಿ ಮಾಡಿದೆ. ಫ್ರಾನ್ಸ್, ಜರ್ಮನಿ, ಕೆನಡಾ ಮತ್ತು ಇತರ ಹಲವು ದೇಶಗಳು ನಡೆಸುವುದಕ್ಕಿಂತ ಅತೀ ಹೆಚ್ಚು ಸೋಂಕು ಪರೀಕ್ಷೆಗಳನ್ನು ಕಜಕಿಸ್ಥಾನನಡೆಸುತ್ತಿದೆ. ಅಲ್ಲಿ ಸರಿಸುಮಾರು 1,400 ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಸೋಂಕು ಏರಿಕೆ ಪ್ರಮಾಣ ಶೇ.3ರಷ್ಟಿದೆ. ಇಲ್ಲಿಯವರೆಗೆ ದೇಶದಲ್ಲಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 23 ಸಾವಿರದಷ್ಟು ಪ್ರಕರಣಗಳು ಲಕ್ಷಣ ರಹಿತವಾಗಿವೆ. ಬಿಕ್ಕಟ್ಟು ತಡೆಯುವ ವಿಶ್ವಾಸವನ್ನು ಅಲ್ಲಿನ ಸರಕಾರ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.