ಕೋವಿಡ್ ಸೋಂಕು ತಡೆಗೆ ಔಷಧಿ ಮುಖ್ಯ
Team Udayavani, Jul 10, 2020, 9:15 AM IST
ಬಸವಕಲ್ಯಾಣ: ದೇಶ ಮಹಾಮಾರಿ ಕೋವಿಡ್ ವೈರಸ್‌ನಿಂದ ಮುಕ್ತಿಯಾಗಬೇಕಾದರೆ ಔಷಧಿ ತುಂಬಾ ಅವಶ್ಯಕವಾಗಿದೆ ಎಂದು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಹೇಳಿದರು.
ತಾಲೂಕಿನ ಹಾರಕೂಡ ಮಠದಲ್ಲಿ ಡಿಸಿಸಿ ಬ್ಯಾಂಕ್, ಕಾಸ್ಕರ್ಡ್ ಮತ್ತು ಪಿಕೆಪಿಎಸ್ ಸಂಯುಕ್ತಾಶ್ರಯದಲ್ಲಿ ನಡೆದ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾರ್ಗದರ್ಶನ ದಂತೆ ಆಶಾ ಕಾರ್ಯಕರ್ತೆಯರ ಸೇವೆ ಪರಿಗಣಿಸಿ ಬ್ಯಾಂಕ್ ವತಿಯಿಂದ ಧನ ಸಹಾಯ ನೀಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಡಾ| ಚನ್ನವೀರ ಶಿವಾಚಾರ್ಯರು ಮಾತನಾಡಿ, ಮಹಾಮಾರಿ ಕೋವಿಡ್ ವೈರಸ್ ಹರಡುವುದು ಆರಂಭವಾಗಿನಿಂದಲೂ ಈವರೆಗೆ ಜಿಲ್ಲೆಯಲ್ಲಿ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತಿಯರನ್ನು ಗುರುತಿಸಿ ಪ್ರೋತ್ಸಾಹ ಧನ ಜತೆಗೆ ಪ್ರಶಸ್ತಿ ಪತ್ರ ನೀಡುತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿಠuಲರೆಡ್ಡಿ ಎಡಮಲ್ಲೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತರಾವ ಪಾಟೀಲ,ಸಿಡಿಒ ಮಲ್ಲಿನಾಥ ಮಠಪತಿ, ಸೋಮಶೆಂಖರ ಬಿರಾದಾರ, ಸಂಗಮೇಶ, ಕೃಷ್ಣಮೂರ್ತಿ, ಡಿಒ ಬಸವರಾಜ ಇಲ್ಲಾಮಲ್ಲೆ, ವ್ಯವಸ್ಥಾಪಕ ರಘುನಾಥ ರೆಡ್ಡಿ, ಗೋವಿಂದರಾವ ಕುಲಕರ್ಣಿ, ಪಿಕೆಪಿಎಸ್ ಅಧ್ಯಕ್ಷ ಶಿವಶರಣಪ್ಪ ಜಮಾದಾರ, ಅಶೋಕ ಖೆಲಜಿ, ಶಿವಶಂಕರ ಬಿರಾದಾರ, ಗೋವಿಂದರಾವ ಹಾಗೂ ನಾಗರಾಳೆ ಇದ್ದರು. ವೀರಯ್ಯಸ್ವಾಮಿ ನಿರೂಪಿಸಿದರು. ಉಮೇಶ ಕುಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್‌ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.