ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂ
Team Udayavani, Jul 10, 2020, 2:07 PM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.
ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಸಿಎಂ ಗೃಹಕಚೇರಿ ಕೃಷ್ಣಾದ ಟಿಲಿಫೋನ್ ಆಪರೇಟರ್, ಇಬ್ಬರು ಎಸ್ಕಾರ್ಟ್ಸ್, ಧವಳಗಿರಿ ನಿವಾಸದ ಬಾಣಸಿಗ, ಕಾರು ಚಾಲಕ ಸೇರಿದಂತೆ ಹತ್ತು ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಸಿಎಂ ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿಯೇ ಕೆಲಸ ನಿರ್ವಹಿಸಲಿದ್ದಾರೆ. ಇಂದು ವಿಧಾನಸೌಧದಲ್ಲಿ ನಿವೃತ್ತಿ ಹೊಂದಿದ ವಿಧಾನ ಪರಿಷತ್ ಸದಸ್ಯರ ಬೀಳ್ಕೊಡುಗೆ ಸಮಾರಂಭಕ್ಕೂ ಬಿಎಸ್ ವೈ ಹಾಜರಾಗದೆ, ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.