ಗೋಹತ್ಯೆ ನಿಷೇಧ ಕಾಯ್ದೆ: ಅಧಿವೇಶನದಲ್ಲಿ ಮಂಡನೆ
Team Udayavani, Jul 11, 2020, 7:08 AM IST
ಬೆಂಗಳೂರು: ರಾಜ್ಯದಲ್ಲಿ ಉತ್ತರ ಪ್ರದೇಶ ಹಾಗೂ ಗುಜರಾತ್ ಮಾದರಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ನಿರ್ಧರಿ ಸಲಾಗಿದೆ ಎಂದು ಪಶು ಸಂಗೋ ಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ 19 ನಿಯಂ ತ್ರಣಕ್ಕೆ ಬಂದ ನಂತರ ಉತ್ತರ ಪ್ರದೇಶ ಹಾಗೂ ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಗಳು ಜಾರಿಗೆ ತಂದಿರುವ ಕಾಯ್ದೆ ಬಗ್ಗೆ ಮಾಹಿತಿ ಪಡೆದು ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದರು.
2010ರಲ್ಲಿ ಕರ್ನಾಟಕ ಗೋ ಹತ್ಯೆ ಪ್ರತಿ ಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ಬದಲಾಗಿ, “ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2010 ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಮಂಡಲದಲ್ಲಿ ಮಂಡನೆ ಆಗಿದೆ. ಕೇಂದ್ರ ಗೃಹ ಇಲಾಖೆ ಕೆಲ ಆಕ್ಷೇಪಣೆ ವ್ಯಕ್ತಪಡಿಸಿ ತಿದ್ದುಪಡಿಗೆ ಸೂಚನೆ ನೀಡಿತ್ತು. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೋಹತ್ಯೆ ನಿಷೇದ ಕಾಯ್ದೆ 1964ನ್ನು ಮುಂದುವರಿಸಿತ್ತು.
ಈಗ ಆ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ಎಲ್ಲ ಜಿಲ್ಲಾ ಪ್ರವಾಸ ಕೈಗೊಂಡು ಅಧಿಕಾರಿಗಳು ಗ್ರಾಮೀಣ ಪ್ರದೇಶಕ್ಕೆ ತೆರಳುವಂತೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ ಸ್ಪಂದಿಸಲು 16 ಜಿಲ್ಲೆಗಳಲ್ಲಿ ಪಶು ಆ್ಯಂಬುಲೆನ್ಸ್ ನೀಡಲು ತೀರ್ಮಾನಿಸಲಾಗಿದೆ.
ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಸಾರ್ವಜ ನಿಕರಿಗೆ ಯಾವುದೇ ಸಮಸ್ಯೆಯಾದರೂ ದಿನದ 24 ಗಂಟೆ ಸ್ಪಂದಿಸಲು ವಾರ್ ರೂಮ್ ವ್ಯವಸ್ಥೆ ಮಾಡಲಾಗುವುದು ಎಂದರು. ಗೋವುಗಳ ರಕ್ಷಣೆಗೆ ಗೋಸೇವಾ ಆಯೋಗ ರಚನೆ ಮಾಡಲು ತೀರ್ಮಾನ ಮಾಡಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ 20 ಎಕರೆಯಲ್ಲಿ ರಾಜ್ಯದಲ್ಲಿಯೇ ಮೊದಲ ವಧಾಗಾರ ಮಾಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.