ರೋಗಿಗೆ ಚಿಕಿತ್ಸೆ ಕೊಡಿಸಲು ನೆರವು
Team Udayavani, Jul 11, 2020, 11:27 AM IST
ವಿಜಯಪುರ: ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸರ್ಕಾರ ಸೂಚನೆ ನೀಡಿದ್ದರೂ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸಿಂದಗಿ ತಾಲೂಕಿನ ಮಲಘಾಣ ರೋಗಿಯೊಬ್ಬರಿಗೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಕುಟುಂಬದವರು ರೋಗಿಯನ್ನು ಕಾರಿನಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಕರೆತಂದ ಘಟನೆ ನಡೆದಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತಿದ್ದ ಮಲಘಾಣ ಗ್ರಾಮದ 54 ವರ್ಷದ ವ್ಯಕ್ತಿಯೊಬ್ಬರು ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರೋಗಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಮನಗಂಡ ವೈದ್ಯರು, ವಿಜಯಪುರ ನಗರದ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಸಂಬಂ ಧಿಗಳು ರೋಗಿಯನ್ನು ಕಾರಿನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆ ತಂದು ಹಲವು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಚಿಕಿತ್ಸೆ ನೀಡಲು ಯಾವುದೇ ಖಾಸಗಿ ಆಸ್ಪತ್ರೆ ವೈದ್ಯರು ಮುಂದಾಗದೇ, ಹಾಸಿಗೆ ಲಭ್ಯ ಇಲ್ಲ ಎಂದು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ಇದರಿಂದ ಕಂಗಾಲಾದ ರೋಗಿಯ ಸಂಬಂಧಿಗಳು ರೋಗಿಯನ್ನು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಕರೆತಂದು ಜಿಲ್ಲಾಡಳಿತಕ್ಕೆ ಪರಿಸ್ಥಿತಿ ಮನವರಿಕೆ ಮಾಡಿಕೊಡುವ ಕೊಡಲು ಮುಂದಾಗಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ರೋಗಿ ಇದ್ದ ಕಾರಿನ ಬಳಿಗೆ ಧಾವಿಸಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ. ಅಲ್ಲದೇ ಕೂಡಲೇ ಸರ್ಕಾರಿ ಜಿಲ್ಲಾಸ್ಪತ್ರೆಗೆ ರೋಗಿಯನ್ನು ದಾಖಲಿಸಲು ನೆರವಾಗಿ ಚಿಕಿತ್ಸೆ ಕೊಡಿಸಿ, ಮಾನವೀಯತೆ ಮೆರೆದಿದ್ದಾರೆ.
ನಂತರ ಈ ಕುರಿತು ಪ್ರತಿಕ್ರಿಯಿಸಿದ ಅವರು, ಉಸಿರಾಟದ ಸಮಸ್ಯೆ, ಅಸ್ತಮಾ ಕಾಯಿಲೆ ಎಂದಾಕ್ಷಣ ಕೊರೊನಾ ರೋಗ ಇದೆ ಎಂದು ಭಾವಿಸುವುದು ಬೇಡ. ಕೆಮ್ಮು, ನೆಗಡಿಯಾದರೂ ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಹಾಗಂತ ಇಂಥ ಲಕ್ಷಣ ಇದ್ದವರಿಗೆ ಕೋವಿಡ್ ಸೋಂಕು ಇದೆ ಎಂದಲ್ಲ. ಕೋವಿಡ್ ಲಕ್ಷಣ ಇಲ್ಲದಿದ್ದರೂ ರೋಗ ದೃಢಪಟ್ಟಿರುವ ಪ್ರಕರಣಗಳೂ ನಮ್ಮ ಮುಂದಿವೆ. ಹೀಗಾಗಿ ವೈದ್ಯರು ಕರ್ತವ್ಯ ಪ್ರಜ್ಞೆ ಮೆರೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.