28-29ರಂದು ಕುವೆಂಪು ವಿವಿ ಘಟಿಕೋತ್ಸವ?

ಸಿಂಡಿಕೇಟ್‌ ಸಭೆಯಲ್ಲಿ ನಿರ್ಧಾರ

Team Udayavani, Jul 11, 2020, 12:50 PM IST

28-29ರಂದು ಕುವೆಂಪು ವಿವಿ ಘಟಿಕೋತ್ಸವ?

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಜು. 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್‌ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ| ಬಿ. ಪಿ. ವೀರಭದ್ರಪ್ಪ ತಿಳಿಸಿದ್ದಾರೆ.

ಜು.9ರಂದು ನಡೆದ ಸಿಂಡಿಕೇಟ್‌ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್‌ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಈಗಾಗಲೇ ಕೋವಿಡ್‌-19ರ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್‌ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಆಂತರಿಕ ಘಟಿಕೋತ್ಸವ: ಕೋವಿಡ್‌ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಇನ್‌ ಹೌಸ್‌ ಮಾದರಿಯಲ್ಲಿ (ಆಂತರಿಕವಾಗಿ) ಆಯೋಜಿಸಲಾಗುವುದು. ಸುಮಾರು ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರ ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವ ನಡೆಸಲಾಗುವುದು. ರ್‍ಯಾಂಕ್‌ ವಿಜೇತರು, ಪಿಎಚ್‌ಡಿ ಪದವೀಧರರು, ಗೌರವ ಡಾಕ್ಟರೆಟ್‌ ಪಡೆದವರು, ಸಿಂಡಿಕೇಟ್‌ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಬಹುದಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

ಜೇಷ್ಠತಾ ಪಟ್ಟಿಗೆ ಅನುಮೋದನೆ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಜೇಷ್ಠತೆಗೆ ಸಂಬಂಧಿಸಿದಂತೆ, ಜ. 20, 2020ರಂದು ಅಂತರ್ಜಾಲದಲ್ಲಿ ಪ್ರಕಟಿಸಿದ ಜೇಷ್ಠತಾ ಪಟ್ಟಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜೊತೆಗೆ ಇದಕ್ಕೆ ಸಂಬಂಧಿಸಿದ ಬಡ್ತಿ ಮತ್ತು ವೇತನ ಸವಲತ್ತುಗಳನ್ನು ಸಹ ಅತಿ ಜರೂರೆಂದು ಪರಿಗಣಿಸಿ ಕೂಡಲೇ ಅರ್ಹ ಸಿಬ್ಬಂದಿಗೆ ಒದಗಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಕುಲಸಚಿವ ಪ್ರೊ| ಎಸ್‌. ಎಸ್‌. ಪಾಟೀಲ್‌, ಪರೀಕ್ಷಾಂಗ ಕುಲಸಚಿವ ಪ್ರೊ| ಎಂ ವೆಂಕಟೇಶ್ವರಲು, ಸಿಂಡಿಕೇಟ್‌ ಸದಸ್ಯರಾದ ಧರ್ಮಪ್ರಸಾದ್‌, ಬಳ್ಳೇಕೆರೆ ಸಂತೋಷ್‌, ಎಚ್‌. ಬಿ. ರಮೇಶ್‌ ಬಾಬು, ರಾಮಲಿಂಗಪ್ಪ, ಎಸ್‌. ಆರ್‌. ನಾಗರಾಜ್‌, ಕಿರಣ್‌ ದೇಸಾಯಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.