ಹೆಚ್ಚುತ್ತಿರುವ ಕೋವಿಡ್ ಪ್ರಕರಣ ! ಈ ಬಾರಿಯ ಮರವಂತೆ ಜಾತ್ರೆ ರದ್ದು
Team Udayavani, Jul 11, 2020, 2:49 PM IST
ಕುಂದಾಪುರ: ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಜು.20 ರಂದು ನಡೆಯಬೇಕಿದ್ದ ಈ ವರ್ಷದ ಆಷಾಢ ಅಮಾವಾಸ್ಯೆ ಜಾತ್ರೆ (ಮರವಂತೆ ಜಾತ್ರೆ) ಯು ರದ್ದುಗೊಂಡಿದೆ.
ಪ್ರತಿ ವರ್ಷ ಆಷಾಢ ಅಮಾವಾಸ್ಯೆಯಂದು ವಿಜೃಂಭಣೆಯಿಂದ ನಡೆಯುತ್ತಿದ್ದ ಮರವಂತೆ ಜಾತ್ರೆಗೆ ಈ ಬಾರಿ ಕೋವಿಡ್ ಕರಿನೆರಳು ಅಡ್ಡಿಯಾಗಿದೆ. ಧಾರ್ಮಿಕ ಕಾರ್ಯಕ್ರಮಗಳು, ಶುಭ ಸಮಾರಂಭಗಳಲ್ಲಿ ಹೆಚ್ಚು ಜನರನ್ನು ಸೇರಿಸಬಾರದು ಎನ್ನುವ ಜಿಲ್ಲಾಧಿಕಾರಿಗಳ ಆದೇಶವಿದ್ದು, ಹಾಗಾಗಿ ಜಾತ್ರೆಗೆ ಬೇರೆ ಬೇರೆ ಕಡೆಯಿಂದ ಸಾವಿರಾರು ಮಂದಿ ಬರುವ ನಿರೀಕ್ಷೆ ಇರುವುದರಿಂದ ಈ ಬಾರಿಯ ಜಾತ್ರೆಯನ್ನು ರದ್ದುಗೊಳಿಸಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತೀರ್ಮಾನಿಸಿದೆ.
ಜಾತ್ರೆಯ ಪ್ರಯುಕ್ತ ಸಮಿತಿ ಪದಾಧಿಕಾರಿಗಳು, ಅರ್ಚಕ ವೃಂದದಿಂದ ಸರಳವಾಗಿ ಧಾರ್ಮಿಕ ವಿಧಿ- ವಿಧಾನಗಳು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಹೆಬ್ಟಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.