ಭಾನುವಾರದ ಲಾಕ್ ಡೌನ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಗಿ ಕರ್ಫ್ಯೂ ಜಾರಿ
Team Udayavani, Jul 12, 2020, 10:07 AM IST
ಮಂಗಳೂರು: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಹೇರಿರುವ ಭಾನುವಾರದ ಲಾಕ್ ಡೌನ್ ಕಾರಣದಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಎರಡನೇ ಹಂತದ ವೀಕೆಂಡ್ ಲಾಕ್ ಡೌನ್ ನ ಎರಡನೇ ಭಾನುವಾರ ಇಂದಾಗಿದ್ದು, ಅಗತ್ಯ ಸೇವೆ ಹೊರತು ಪಡಿಸಿ ಎಲ್ಲಾ ರೀತಿಯ ಸೇವೆಗಳು ಇಂದು ಬಂದ್ ಆಗಿರುತ್ತದೆ. ಹಾಲು, ಪೇಪರ್, ಮೆಡಿಕಲ್ ಮತ್ತು ವೈದ್ಯಕೀಯ ಸೇವೆ ಮಾತ್ರ ಲಭ್ಯವಿದ್ದು, ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದು ಎಂದು ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ತಬ್ಧವಾಗಿದ್ದು, ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ಮಂಗಳೂರು ನಗರಕ್ಕೆ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಒಂದು ವೇಳೆ ಸಾರ್ವಜನಿಕರು ವಾಹನಗಳಲ್ಲಿ ಅನಗತ್ಯವಾಇ ಓಡಾಡಿದರೆ ವಾಹನ ಜಪ್ತಿ ಮಾಡುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.