4 ತಾಲೂಕಲ್ಲೂ ಕೋವಿಡ್‌ ಕೇಂದ್ರ: ಸಚಿವ


Team Udayavani, Jul 12, 2020, 10:45 AM IST

4 ತಾಲೂಕಲ್ಲೂ ಕೋವಿಡ್‌ ಕೇಂದ್ರ: ಸಚಿವ

ರಾಮನಗರ: ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಕೋವಿಡ್‌-19 ಕೇರ್‌ ಸೆಂಟರ್‌ ಸ್ಥಾಪಿಸುವಂತೆ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ. ಎನ್‌.ಅಶ್ವಥನಾರಾಯಣ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಶುಕ್ರವಾರ ಸಂಜೆ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಕೋವಿಡ್‌ 19 ಸ್ಥಿತಿ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ನಡೆದ ಸಭೆಯಲ್ಲಿ ಮಾತನಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಮೊದಲು ನೀಡಿದ್ದ ಸೂಚನೆಯಂತೆ ಜಿಲ್ಲೆಯಲ್ಲಿ 500 ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ತಾಲೂಕಿನಲ್ಲಿ ಯೂ ತಲಾ 500 ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಲು ನೀಲ ನಕ್ಷೆ ಮತ್ತು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡಿರುವುದಾಗಿ ತಿಳಿಸಿದರು.

ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಯಾವ ಲೋಪಗಳಿಗೂ ಅವಕಾಶವಾಗದಂತೆ ಕೇಂದ್ರಗಳನ್ನು ನಿರ್ವಹಿಸಿ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಕನಿಷ್ಠ 2-3 ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಿಕೊಳ್ಳಿ, ರೋಗಿಗಳಿಗೆ ಆಕ್ಸಿಜನ್‌ ವ್ಯವಸ್ಥೆ, ಆಕ್ಸಿಜನ್‌ ಅಳೆಯುವ ಸಾಧನ ಸಿದ್ಧವಾಗಿರಲಿ ಎಂದರು.

ಟ್ರೂನಾಟ್‌ ಸಾಧನಕ್ಕೆ ಸಚಿವರ ಸಲಹೆ: ಜಿಲ್ಲಾಸ್ಪತ್ರೆಯ ನೂತನ ಕಟ್ಟಡದಲ್ಲಿ ಸ್ಥಾಪಿಸಿರುವ ಕೋವಿಡ್‌ 19 ಸೋಂಕು ಪತ್ತೆ ಹಚ್ಚುವ ಪ್ರಯೋಗಾಲಯದಲ್ಲಿ ಮಾದರಿಗಳ ಪರೀಕ್ಷೆ ಆರಂಭವಾಗಿರುವ ಬಗ್ಗೆ ಸಚಿವರು ಮಾಹಿತಿ ಪಡೆದರು. ಟ್ರೂನಾಟ್‌ ಪರೀಕ್ಷಾ ಸಾಧನ ಅಳವಡಿಸಿಕೊಂಡರೆ ಒಂದೆರೆಡು ಗಂಟೆಗಳಲ್ಲೇ ಗಂಟಲು ದ್ರವ ಪರೀಕ್ಷೆ ಫ‌ಲಿತಾಂಶ ಲಭ್ಯವಾಗಲಿದೆ ಎಂದು ಸಲಹೆ ನೀಡಿದರು. ಜಿಪಂ ಸಿಇಒ ಇಕ್ರಂ ಮುಂಬೈನಿಂದ ಈ ಸಾಧನಗಳು ಸದ್ಯದಲ್ಲೇ ಬರಲಿದೆ ಎಂದರು. ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರುವವರಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಅನೂಪ್‌ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಜಿಲ್ಲಾ ಆರೋಗ್ಯ ಅಧಿಕಾರಿ ನಿರಂಜನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.