ರಾಜಧಾನಿ ಮಾದರಿಯಲ್ಲಿ ದ.ಕನ್ನಡ ಜಿಲ್ಲೆಯೂ ಲಾಕ್ ಡೌನ್? ಸಚಿವ ಕೋಟ ಸ್ಪಷ್ಟನೆ
Team Udayavani, Jul 12, 2020, 2:40 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಮತ್ತೊಮ್ಮೆ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.
ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ಧಿಡೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.