ಕೊಪ್ಪಳ ಕೋವಿಡ್ ಸೋಂಕಿಗೆ ಮತ್ತಿಬ್ಬರು ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆ
Team Udayavani, Jul 12, 2020, 5:55 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸಾವಿನ ಆರ್ಭಟವೂ ಮುಂದುವರೆಯುತ್ತಿದ್ದು, ಭಾನುವಾರ ಮತ್ತಿಬ್ಬರು ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದಾರೆ. ಈ ಇಬ್ಬರ ಸಾವು ಸೇರಿದಂತೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ. ಇದು ಜನರನ್ನು ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯ 68 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿತ್ತು. ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮೃತಪಟ್ಟಿದ್ದಾರೆ. ಇನ್ನೂ ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ 39 ವರ್ಷದ ಮಹಿಳೆಗೂ ಸೋಂಕಿನ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಅವರನ್ನು ತಳಕಲ್ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿತ್ತು. ಅವರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸಾವಿನ ಕೇಕೆ ಹಾಕುತ್ತಿರುವುದು ನಿಜಕ್ಕೂ ಜನ ಜೀವನ ಬೆಚ್ಚಿ ಬೀಳುವಂತೆ ಮಾಡುತ್ತಿದೆ. ಭಾನುವಾರ ಇಬ್ಬರ ಮಹಿಳೆಯರ ಸಾವು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಇದು ಜನರಲ್ಲಿ ದಿನೇ ದಿನೇ ಆತಂಕ ತಂದಿಡುತ್ತಿದೆ. ಜಿಲ್ಲಾಡಳಿತವು ಮೃತರ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.