ಕೋವಿಡ್ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 5 ಬಲಿ!
Team Udayavani, Jul 12, 2020, 6:43 PM IST
ಮಂಗಳೂರು : ಕೋವಿಡ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌದ್ರಾವತಾರ ಮೆರೆದಿದ್ದು ಜಿಲ್ಲೆಯಲ್ಲಿ ಇಂದು ಒಂದೇ ದಿನ 5 ಜನರನ್ನು ಬಲಿ ಪಡೆದುಕೊಂಡಿದೆ.
ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ ಉರ್ವಾಸ್ಟೋರ್ ನಿವಾಸಿ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಹಾಗೂ ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಸಾವನ್ನಪ್ಪಿದ ಐದು ಮಂದಿಯಲ್ಲಿ ನಾಲ್ವರು ಮಂಗಳೂರು ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ ಪುತ್ತೂರು ಮೂಲದ ಓರ್ವ ಪುತ್ತೂರು ಮೂಲದ ಸೋಂಕಿತ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.