ಮೂರನೇ ಪರೀಕ್ಷೆಯಲ್ಲಿ ಸಚಿವ ಸಿ.ಟಿ.ರವಿಗೆ ಕೋವಿಡ್ ಪಾಸಿಟಿವ್ ದೃಢ
Team Udayavani, Jul 13, 2020, 9:28 AM IST
ಚಿಕ್ಕಮಗಳೂರು: ಸಚಿವ ಸಿ ಟಿ ರವಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಹಿಂದೆ ಒಮ್ಮೆ ಪಾಸಿಟಿವ್ ವರದಿ ಬಂದಿದ್ದರೂ ಮೂರನೇ ಬಾರಿಯ ಪರೀಕ್ಷೆ ನಡೆಸಿದಾಗಲೂ ಕೋವಿಡ್ ಪಾಸಿಟಿವ್ ವರದಿಯಾಗಿದೆ.
ಈ ಬಗ್ಗೆ ಸ್ವತಃ ಸಚಿವ ಸಿ ಟಿ ರವಿ ಅವರು ಟ್ವೀಟ್ ಮಾಡಿದ್ದಾರೆ. ಥರ್ಡ್ ಅಂಪೈರ್ ಫಲಿತಾಂಶದಲ್ಲಿ ಕೋವಿಡ್ ಪಾಸಿಟಿವ್ ಇದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಮನೆಯಿಂದಲೇ ಕೆಲಸ ಮುಂದುವರಿಸುತ್ತೇನೆ. ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಎರಡು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಬೆಂಗಳೂರಿನಲ್ಲಿ ಮಾತನಾಡುತ್ತಾ, ಸಚಿವ ಸಿ ಟಿ ರವಿಯವರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದಿದ್ದರು. ನಂತರ ಟ್ವೀಟ್ ಮಾಡಿದ ಸಿ ಟಿ ರವಿಯವರು ನನಗರ ಯಾವುದೇ ರೋಗ ಲಕ್ಷಣಗಳಿಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದರು.
ಸಚಿವ ರವಿ ಅವರು ಈ ಮೊದಲು ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಒಂದು ಬಾರಿ ಪಾಸಿಟಿವ್ ಮತ್ತೊಂದು ಬಾರಿ ನೆಗಟಿವ್ ವರದಿಯಾಗಿತ್ತು. ಈ ಕಾರಣದಿಂದ ಮೂರನೇ ಬಾರಿಗೆ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅದರ ವರದಿ ಬಂದಿದ್ದು ಪಾಸಿಟಿವ್ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.