ಆತ್ಮ ನಿರ್ಭರ ಪ್ಯಾಕೇಜ್‌ನಿಂದ ಆರ್ಥಿಕ ಚೇತರಿಕೆ: ಸಿದ್ದೇಶ್ವರ್
Team Udayavani, Jul 13, 2020, 3:07 PM IST
ದಾವಣಗೆರೆ: ಆತ್ಮ ನಿರ್ಭರ ಭಾರತ ಪ್ಯಾಕೇಜ್ ನವಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್ ರೋಗದಿಂದ ತತ್ತರಿಸಿದ್ದ ಭಾರತದ ಆರ್ಥಿಕತೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಆತ್ಮ ನಿರ್ಭರ ಭಾರತ ಪ್ಯಾಕೇಜ್‌ನಿಂದಾಗಿ ವೃದ್ಧಿಯತ್ತ ಸಾಗಿದೆ.ಭಾರತದ ಆರ್ಥಿಕತೆಯ ವಿಷಯದಲ್ಲಿ ಆತ್ಮ ನಿರ್ಭರ ಪ್ಯಾಕೇಜ್ ಅತ್ಯಂತ ಪ್ರಮುಖ ಪಾತ್ರ ವಹಿಸಿರುವುದು ಮಾತ್ರವಲ್ಲ, ನವಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಆಗಿದೆ ಎಂದು ತಿಳಿಸಿದ್ದಾರೆ. ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ 20 ಲಕ್ಷ ಕೋಟಿ ಬೃಹತ್ ಪ್ಯಾಕೇಜ್‌ನಲ್ಲಿ 5.94 ಲಕ್ಷ ಕೋಟಿಯನ್ನು ಜನರಿಗೆ ಹೆಚ್ಚು ಉದ್ಯೋಗ ಒದಗಿಸುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ರಿಯಲ್‌ಎಸ್ಟೇಟ್ ವಲಯ ಮತ್ತು ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. 3.16 ಲಕ್ಷ ಕೋಟಿ ಅನುದಾನವನ್ನು ರೈತರು, ಗ್ರಾಮೀಣಆರ್ಥಿಕತೆ, ವಲಸೆ ಕಾರ್ಮಿಕರು, ನಗರದ ಬಡವರು, ಮಧ್ಯಮ ವರ್ಗದವರ ಮನೆ ಖರೀದಿದಾರರಿಗೆ ಮೀಸಲಿಡಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಗಳ ಸುಲಭ ಸಾಲ ಸಿಗಲಿದೆ ಎಂದು ತಿಳಿಸಿದ್ದಾರೆ.
ದೇಶಾದ್ಯಂತ ವಿಮಾನ ನಿಲ್ದಾಣ, ಬಂದರು ನಿರ್ಮಾಣ, ಸೇರಿದಂತೆ ಮೂಲಸೌಕರ್ಯಅಭಿವೃದ್ಧಿಗೆ 1 ಲಕ್ಷ ಕೋಟಿ, 30 ಲಕ್ಷ ಕೈಗಾರಿಕೆಗಳಿಗೆ ಅಂದಾಜು 1.10 ಲಕ್ಷ ಕೋಟಿ ಸಾಲ ವಿತರಿಸಲಾಗಿದೆ. 200 ಕೋಟಿ ಗಿಂತ ಕಡಿಮೆ ಮೊತ್ತದ ಟೆಂಡರ್‌ಗಳಲ್ಲಿ ಗ್ಲೋಬಲ್ ಟೆಂಡರ್‌ದಾರರ ಪಾಲ್ಗೊಳ್ಳುವಿಕೆ ರದ್ದುಗೊಳಿಸಿರುವ ಪರಿಣಾಮ ಸ್ಥಳೀಯ ಕೈಗಾರಿಕೆಗಳು ಬಲಿಷ್ಠಗೊಳ್ಳಲಿವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 80 ಕೋಟಿ ಜನರಿಗೆ ನವೆಂಬರ್‌ವರೆಗೆ ಉಚಿತ ಪಡಿತರ, ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ ಕ್ರಮ ಕೈಗೊಳ್ಳಲಾಗಿದೆ. ಜೂನ್‌ವರೆಗೆ 36 ಕೋಟಿ ಬ್ಯಾಂಕ್ ಖಾತೆಗಳಿಗೆ 64,500 ಕೋಟಿ ಹಣವನ್ನು ನೇರ ವರ್ಗಾವಣೆ ಮಾಡಲಾಗಿದೆ. ವಲಸೆ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಉದ್ಯೋಗ ಖಾತ್ರಿಯೋಜನೆಗಾಗಿ 61 ಸಾವಿರ ಕೋಟಿ ಅನುದಾನ ಕ್ಕೆ ಹೆಚ್ಚುವರಿಯಾಗಿ 40 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ದಿನಗೂಲಿ ಹೆಚ್ಚಿಸಲಾಗಿದೆ.70 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲಾಗಿದೆ. 62 ಸಾವಿರ ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ಕೃಷಿ ಮೂಲಸೌಕರ್ಯಕ್ಕಾಗಿ 1 ಲಕ್ಷ ಕೋಟಿ, ಪಶು ಸಂಗೋಪನಾ ಮೂಲಸೌಕರ್ಯಅಭಿವೃದ್ಧಿಗೆ 15 ಕೋಟಿ ಒದಗಿಸಲಾಗಿದೆ. 2020-21 ನೇ ಸಾಲಿನಲ್ಲಿ 14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ರಕ್ಷಣಾ ಕ್ಷೇತ್ರ ಮತ್ತು ಅಂತರಿಕ್ಷ ವಲಯದಲ್ಲಿ ಸ್ವಾವಲಂಬನೆ ಸಾಧಿ ಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.