ಯಾವ ಯಾವ ಜಿಲ್ಲೆಗಳಲ್ಲಿ ಲಾಕ್ ಡೌನ್? ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಚರ್ಚೆ
Team Udayavani, Jul 13, 2020, 3:20 PM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕೋವಿಡ್ ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು.
ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಲು ಆದ್ಯತೆ ನೀಡಿ.1 ಲಕ್ಷ ಟೆಸ್ಟ್ ಕಿಟ್ ಖರೀದಿಸಲಾಗಿದೆ. ಈಗಾಗಲೇ ಜಿಲ್ಲೆಗಳಿಗೆ ವಿತರಿಸಲಾಗಿದ್ದು, ತುರ್ತು ಪ್ರಕರಣಗಳಲ್ಲಿ ವಿವೇಚನೆಯಿಂದ ಈ ಪರೀಕ್ಷೆ ನಡೆಸಲು ಸೂಚಿಸಲಾಯಿತು.
ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ, ಕಲಬುರಗಿ ಹೆಚ್ಚು ಪ್ರಕರಣ ದಾಖಲಾಗಿದೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಬಿಎಸ್ವೈ ಸೂಚಿಸಿದರು. ಬೀದರ್ ಜಿಲ್ಲೆ ಸಾವಿನ ಪ್ರಮಾಣ ದೇಶದ 5 ಜಿಲ್ಲೆಗಳಲ್ಲಿ ಒಂದಾಗಿದ್ದು, ಮರಣ ಪ್ರಮಾಣ ನಿಯಂತ್ರಿಸುವಂತೆ ಸೂಚಿಸಿದರು. ಈ ವರೆಗೆ ಸಂಭವಿಸಿದ ಮರಣಗಳ ಕುರಿತು ತಜ್ಞರ ವಿಶ್ಲೇಷಣಾ ವರದಿಯನ್ನು ಕೂಡಲೇ ಕಳುಹಿಸುವಂತೆ ತಿಳಿಸಲಾಯಿತು.
ಕಂಟೇನ್ ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕಾಗಿದೆ. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಹೊರಗಿನಿಂದ ವಲಸೆ ಬಂದವರ ಕ್ವಾರಂಟೈನ್ ಮತ್ತು ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಯಿತು. ಅಲ್ಲದೆ, ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡ್ಡಿಯಾಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಯಿತು. ಯಾವುದೆ ಕಾರಣಕ್ಕೆ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಕೋವಿಡ್ ಕಂಟಕಕ್ಕೆ ಕರಾವಳಿ ಬಂದ್: ದ. ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಗೆ ನಿರ್ಧಾರ
ಬೆಂಗಳೂರಿನಲ್ಲಿ ಕೋವಿಡ್ ಮತ್ತು ನಾನ್ ಕೋವಿಡ್ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯುವಂತೆ ಸೂಚಿಸಲಾಯಿತು.
60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು. ಸೀಲ್ ಡೌನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಈ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು. ಜನರು ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು ಎಂದು ಸೂಚಿಸಲಾಯಿತು.
ಇದನ್ನೂ ಓದಿ: ಕೋವಿಡ್ 19; ಬೆಂಗಳೂರು, ದ.ಕ ಮತ್ತೆ ಲಾಕ್ ಡೌನ್…ಯಾವ ವಸ್ತು ಸಿಗುತ್ತೆ, ಯಾವುದು ಇರಲ್ಲ?
ಅಂಬ್ಯುಲೆನ್ಸ್ ಮತ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಬಿಎಸ್ ವೈ ಸೂಚಿಸಿದರು. ಡಿಜಿಟಲ್ ಎಕ್ಸ್ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದ್ದು, ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡುವಂತೆ ಸೂಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.