ಕುಂದಾಪುರ: ಇಬ್ಬರು ಪೊಲೀಸರು ಓರ್ವ ಚಾಲಕನಿಗೆ ಕೋವಿಡ್-19 ಸೋಂಕು ದೃಢ
Team Udayavani, Jul 13, 2020, 4:54 PM IST
ಕುಂದಾಪುರ: ಜನರ ಸುರಕ್ಷತೆಗಾಗಿ ದುಡಿಯುವ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕಿನ ಕಾಟ ಮುಂದುವರಿದಿದೆ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಇಂದು ಇಬ್ಬರು ಪೊಲೀಸರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಕುಂದಾಪುರ ಉಪವಿಭಾಗದ ಓರ್ವ ಪೊಲೀಸ್ ಸಿಬ್ಬಂದಿಗೆ ಇಂದು ಕೋವಿಡ್-19 ಸೋಂಕು ಇರುವುದು ಧೃಢವಾಗಿದೆ. ರೋಗಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಕಳೆದ ಜುಲೈ 2ರಿಂದ ಇವರು ಹೋಂ ಕ್ವಾರಂಟೈನ್ ಆಗಿದ್ದರು. ಇಂದು ಇವರಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಉಪವಿಭಾಗದ ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸ್ಯಾನಿಟೈಸ್ ಮಾಡಿದ ಬಳಿಕ ಮತ್ತೆ ಕರ್ತವ್ಯಕ್ಕೆ ತೆರೆದುಕೊಳ್ಳುತ್ತದೆ ಎಂದು ವರದಿಯಾಗಿದೆ.
ಕುಂದಾಪುರ ಸಂಚಾರ ಠಾಣೆಯ ಹೈವೇ ಪ್ಯಾಟ್ರೋಲ್ ಕರ್ತವ್ಯದಲ್ಲಿದ್ದ ಎಎಸ್ ಐ ಮತ್ತು ಅವರ ಕಾರು ಚಾಲಕ(ಜಿಲ್ಲಾ ಸಶಸ್ತ್ರ ಪಡೆಯ ಸಿಬಂದಿ) ಗೂ ಕೋವಿಡ್-19 ಸೋಂಕು ದೃಢವಾಗಿದೆ. ಇವರಿಬ್ಬರೂ ಜುಲೈ 5ರಿಂದ ಕ್ವಾರಂಟೈನ್ ನಲ್ಲಿದ್ದರು.
ಎಎಸ್ಪಿ ಕಚೇರಿಯನ್ನು ಎರಡು ದಿನಗಳ ಕಾಲ ಮುಚ್ಚಿ ಸ್ಯಾನಿಟೈಸ್ ಮಾಡಲಾಗುವುದು. ಕಚೇರಿ ತಾತ್ಕಾಲಿಕವಾಗಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಉಡುಪಿ ಡಿವೈಎಸ್ಪಿ ಅವರು ಕುಂದಾಪುರ ವಿಭಾಗದ ಪ್ರಭಾರ ಹೊಣೆ ಹೊತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.