ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ, ಬಾಲಕಿಯರೇ ಮೇಲುಗೈ
Team Udayavani, Jul 14, 2020, 11:56 AM IST
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪತ್ರಿಕಾಗೋಷ್ಟಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಕಳೆದ ಬಾರಿಗಿಂತ ಈ ವರ್ಷ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಈ ಬಾರಿ ಶೇ.61.80 ಫಲಿತಾಂಶ ಬಂದಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು, ಕಳೆದ ವರ್ಷ ಶೇ.61.73 ರಷ್ಟು ಫಲಿತಾಂಶ ಬಂದಿತ್ತು.
ಈ ವರ್ಷ 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 3,84,947 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 5,56,267 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆದಿದ್ದು ಶೇಕಡವಾರು ಫಲಿತಾಂಶ 69.20ರಷ್ಟಿದೆ.
ಉಡುಪಿ ಈ ಬಾರಿಯೂ ಪ್ರಥಮ ಸ್ಥಾನ (90.71%) ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ(90.71%) ಸ್ಥಾನ ಮತ್ತು ಕೊಡಗು ಜಿಲ್ಲೆ ಮೂರನೇ ಸ್ಥಾನ (81.53%) ಪಡೆದಿದೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಕೊನೆಯ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷದ ಫಲಿತಾಂಶದ ಲೆಕ್ಕಾಚಾರದಲ್ಲಿ ಉಡುಪಿ ಈ ವರ್ಷ ಪ್ರಥಮ ದ.ಕ ದ್ವಿತೀಯ ಎಂದು ಇಲಾಖೆ ಘೋಷಿಸಿದೆ.
91,025 ಪುನರಾವರ್ತಿತ ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು, ಇವರಲ್ಲಿ 25,602 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇವರ ಶೇಕಡವಾರು ಫಲಿತಾಂಶ 46.56 % ರಷ್ಟಿದೆ.
ಈ ವರ್ಷ 27,985 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು 6,748 ಮಂದಿ ಉತ್ತೀರ್ಣರಾಗಿದ್ದಾರೆ. ಶೇ.24.11 ಫಲಿತಾಂಶ ಬಂದಿದೆ.
ಒಟ್ಟಾರೆಯಾಗಿ ವಿಜ್ಞಾನ ವಿಭಾಗದಲ್ಲಿ-ಶೇ.76.2, ಕಲಾ ವಿಭಾಗದಲ್ಲಿ ಶೇ. 41.27, ವಾಣಿಜ್ಯ ವಿಭಾಗದಲ್ಲಿ ಶೇ. 65.52 ಫಲಿತಾಂಶ ಬಂದಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ನೂರಕ್ಕೆ ನೂರು ಫಲಿತಾಂಶ ಪಡೆದ ಸರ್ಕಾರಿ ಕಾಲೇಜು
*ಸರ್ಕಾರಿ ಪಿ.ಯು ಕಾಲೇಜು ಶಿರ್ಲಾಲು ಕಾರ್ಕಳ
*ಸರ್ಕಾರಿ ಪಿ.ಯು ಕಾಲೇಜು ಚಂಗಡಿಹಳ್ಳಿ ಹಾಸನ
*ಸರ್ಕಾರಿ ಪಿ.ಯು ಕಾಲೇಜು ಜೋಡಿಹೊಚ್ಚೆಹಳ್ಳಿ ಕಡೂರು
ಉಡುಪಿಯ ವಿದ್ಯೋದಯ ಕಾಲೇಜಿನ ಅಭಿಜ್ಞಾ ರಾವ್ 600ಕ್ಕೆ 596 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಸಿಎಂಬಿ ಯಲ್ಲಿ ತಲಾ 100 ಅಂಕ, ಇಂಗ್ಲೀಷ್ ನಲ್ಲಿ 96, ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.