ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಉಪ ಮುಖ್ಯಮಂತ್ರಿ ಸ್ಥಾನದಿಂದ ಸಚಿನ್ ಪೈಲಟ್ ವಜಾ
Team Udayavani, Jul 14, 2020, 2:31 PM IST
ಜೈಪುರ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ್ದು ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
15ಕ್ಕೂ ಹೆಚ್ಚು ಶಾಸಕರನ್ನು ತಮ್ಮೊಂದಿಗೆ ಕರೆದೊಯ್ದು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಸಚಿನ್ ಪೈಲಟ್ ಅವರ ನಡೆಗೆ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಮಾತ್ರವಲ್ಲದೆ ಸಭೆಗೆ ಸಚಿನ್ ಪೈಲಟ್ ಅವರಿಗೂ ಆಹ್ವಾನ ನೀಡಲಾಗಿತ್ತು. ಜೈಪುರದ ಫೇರ್ ಮೌಂಟ್ ಹೊಟೇಲ್ ನಲ್ಲಿ ನಡೆದ ಈ ಸಭೆಯಲ್ಲಿ ಪಕ್ಷದ 102 ಶಾಸಕರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಪಕ್ಷದಿಂದ ಸಚಿನ್ ಪೈಲೆಟ್ ಅವರನ್ನು ಹೊರಹಾಕಬೇಕೆಂದು ಶಾಸಕರು ಒತ್ತಾಯಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಸಚಿನ್ ಪೈಲೆಟ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕಾಂಗ್ರೆಸ್ ಕಿತ್ತೊಗೆದಿದ್ದು, ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದಲೂ ವಜಾ ಮಾಡಿದೆ. ಮಾತ್ರವಲ್ಲದೆ ತೆರವಾದ ಸ್ಥಾನಕ್ಕೆ ಗೋವಿಂದ್ ಸಿಂಗ್ ದೊತ್ಸಾರ ಅವರನ್ನು ನೇಮಕ ಮಾಡಿರುವುದಾಗಿ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುರ್ಚೆವಾಲ ತಿಳಿಸಿದ್ದಾರೆ.
ಪೈಲಟ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾಗಿದೆ ಮತ್ತು ಅವರ ಜೊತೆಗೆ ಬಂಡಾಯ ಸಾರಿದ್ದ ಮತ್ತಿಬ್ಬರು ಸಚಿವರನ್ನೂ ಕೂಡ ಉಚ್ಛಾಟಿಸಲಾಗಿದೆ. ಸಚಿನ್ ಪೈಲಟ್ ಹಾಗೂ ಕೆಲ ಸಚಿವರು, ಶಾಸಕರು ಬಿಜೆಪಿ ಆಮಿಷಕ್ಕೆ ಸಿಲುಕಿಕೊಂಡಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆಂದು ಇದೇ ವೇಳೆ ರಣ್ ದೀಪ್ ಸಿಂಗ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.