ರಾಯಬಾಗ ತಾಲೂಕಲ್ಲಿ 20 ಪ್ರಕರಣ
Team Udayavani, Jul 15, 2020, 10:00 AM IST
ರಾಯಬಾಗ: ಕೋವಿಡ್-19 ನಿಯಂತ್ರಣಕ್ಕೆ ಮಂಗಳವಾರದಿಂದ ಲಾಕ್‌ಡೌನ್‌ಗೆ ತಾಲೂಕಾಡಳಿತದ ನಿರ್ಧಾರದ ಮಧ್ಯೆಯೇ ಪಟ್ಟಣದಲ್ಲಿ 3 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಇದರಿಂದ ಜನರಲ್ಲಿ ಆತಂಕ ಹೆಚ್ಚಿದ್ದು, ಮೊದಲ ದಿನದ ಲಾಕ್ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಬಸ್, ಬ್ಯಾಂಕ್, ಔಷಧ ಮತ್ತು ಹಾಲಿನ ಅಂಗಡಿಗಳು ಹೊರತುಪಡಿಸಿ ವ್ಯಾಪಾರ-ವಹಿವಾಟು ಬಂದ್ ಮಾಡಿದ್ದು, ಜನರ ಓಡಾಟ ವಿರಳವಾಗಿತ್ತು. ಮಂಗಳವಾರ ತಾಲೂಕಿನಲ್ಲಿ ಒಟ್ಟು 20 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ರಾಯಬಾಗ ಪಟ್ಟಣದಲ್ಲಿ 3 ಪ್ರಕರಣ ಸೇರಿದಂತೆ ಕುಡಚಿಯಲ್ಲಿ 10, ಬೊಮ್ಮನಾಳ 5, ಸುಟ್ಟಟ್ಟಿ ಗ್ರಾಮದಲ್ಲಿ 1, ಚಿಂಚಲಿ ಪಟ್ಟಣದಲ್ಲಿ 1 ಪ್ರಕರಣ ಕಂಡು ಬಂದಿದ್ದು, ಚಿಂಚಲಿ ಪಟ್ಟಣದ ಯುವಕ ಬಿಮ್ಸ್ ಆಸ್ಪತ್ರೆಯಲ್ಲಿ ಮಕೃತಪಟ್ಟಿರುವುದಾಗಿ ತಾಲೂಕು ವೈದ್ಯಾಧಿಕಾರಿ ಡಾ| ಎಸ್.ಎಸ್.ಬಾನೆ ತಿಳಿಸಿದ್ದಾರೆ. ತಾಲೂಕಿನಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್- ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮೇಲಿಂದ ಮೇಲೆ ಕೈ ತೊಳೆದುಕೊಳ್ಳಬೇಕು. ಅನಾವಶ್ಯಕವಾಗಿ ಹೊರಗೆ ಬರಬಾರದು. ಸಭೆ, ಸಮಾರಂಭದಲ್ಲಿ ಹೆಚ್ಚು ಜನರು ಪಾಲ್ಗೊಳ್ಳಬಾರದು ಎಂದು ಟಿಎಚ್‌ಒ ಮನವಿ ಮಾಡಿದ್ದಾರೆ. ಸೋಂಕಿತರ ಮನೆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.