ಅಕ್ರಮ ಮರಳು ಗಣಿ ತಡೆಗೆ ಉಸ್ತುವಾರಿ ನೇಮಕ
Team Udayavani, Jul 15, 2020, 10:12 AM IST
ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಯಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.
ಜು. 15ರಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪನಿರ್ದೇಶಕರು, ಜು.16ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜು.17ರಂದು ಜಂಟಿ ಕೃಷಿ ನಿರ್ದೇಶಕರು, ಜು.18ರಂದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ಇಂಜಿನೀಯರ್, ಜು.19ರಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜು.20ರಂದು ಜಿಲ್ಲಾ ನೋಂದಣಿ ಅಧಿಕಾರಿಗಳು, ಜು. 21ರಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಜು.22ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜು.23ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು, ಜು.24ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಜು.25ರಂದು ಡಾ| ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ, ಜು.26ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಜು.27ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ), ಜು.28ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಸಾಮಾಜಿಕ), ಜು.29ರಂದು ಸಹಕಾರ ಸಂಘಗಳ ಉಪ ನಿಬಂಧಕರು, ಜು.30ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ, ಜು.31ರಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಇಂಜನೀಯರ್, ಆ.1ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆ.2ರಂದು ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿಗಳು, ಆ.3ರಂದು ರೇಷ್ಮೆ ಇಲಾಖೆ ಉಪನಿರ್ದೇಶಕರು, ಆ.4ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು. ಆ.5ರಂದು ಕರ್ನಾಟಕ ಗೃಹ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಆ.6ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಆ.7ರಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಆ.8 ರಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಆ.9ರಂದು ಜಿಲ್ಲಾ ಪಂಚಾಯತ್ ಡಿಆರ್ಡಿಎ ಯೋಜನಾ ನಿರ್ದೇಶಕರು, ಆ.10 ರಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಆ.11ರಂದು ಹಾವೇರಿ ಉಪ ಕೃಷಿ ನಿರ್ದೇಶಕರು, ಆ.12ರಂದು ರಾಣಿ ಬೆನ್ನೂರು ಉಪ ಕೃಷಿ ನಿರ್ದೇಶಕರು, ಆ.13ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕರು, ಆ.14ರಂದು ಲೋಕೋಪಯಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು, ಆ.15ರಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು. ಆ.16ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು, ಆ.17ರಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಆ.18ರಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು, ಆ.19ರಂದು ಆಹಾರ ಸುರಕ್ಷತೆ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿಗಳು, ಆ.20ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಆ.21ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿ ಕಾರಿಗಳು, ಆ.22ರಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಆ.23ರಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಆ.24 ರಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರನ್ನು ನೇಮಕ ಮಾಡಲಾಗಿಧೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.