ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಶೇ50% ರಷ್ಟು ಹಾಸಿಗೆ ಕೋವಿಡ್ ಸೋಂಕಿತರಿಗೆ ಮೀಸಲಿಡಲು ಸೂಚನೆ
Team Udayavani, Jul 15, 2020, 11:48 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳಲ್ಲಿ ಶೇಕಡಾ 50ರಷ್ಟು ಹಾಸಿಗೆಗಳನ್ನು ಕೋವಿಡ್ 19 ಸೋಂಕಿತರಿಗೆ ಮೀಸಲಿಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ತಮ್ಮ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್ 19 ಸೋಂಕಿತರಿಗೆ ಮೀಸಲಿಡಲು ಎಲ್ಲ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಜೊತೆ ಸಭೆ ನಡೆಸಲು ಸೂಚಿಸಿದ್ದಾರೆ.
ಅಲ್ಲದೆ, ಹಾಸಿಗೆಗಳನ್ನು ಗುರುತಿಸುವಾಗ ಆಕ್ಸಿಜೆನ್, ವೆಂಟಿಲೇಟರ್ ಹಾಗೂ ಐಸಿಯು ಇರುವ ಹಾಸಿಗೆಗಳನ್ನು ಪಡೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಂದ ಹಾಸಿಗೆ ಪಡೆದು ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಸೇರಿಸಿ ಸೋಂಕಿತರಿಗೆ ಅಗತ್ಯವಿರುವ ಹತ್ತಿರದ ಆಸ್ಪತ್ರೆಗೆ ಸೇರಿಸಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಸುವರ್ಣ ಆರೋಗ್ಯ ಟ್ರಸ್ಟ್ ವತಿಯಿಂದ ಅಭಿವೃದ್ಧಿ ಪಡಿಸಿರುವ ತಂತ್ರಾಂಶ ಅಳವಡಿಸಿಕೊಳ್ಳಬೇಕು.
ಕೋವಿಡ್ 19 ಸೋಂಕಿತರಿಗೆ ಅಗತ್ಯ ಅಂಬುಲೆನ್ಸ್ ವ್ಯವಸ್ಥೆ ಮಾಡುವುದು. ಹೆಚ್ಚಿನ ಅಂಬುಲೆನ್ಸ್ ಅಗತ್ಯವಿದ್ದರೆ ಬಾಡಿಗೆ ಪಡೆದು ರೋಗಿಗಳಿಗೆ ಒದಗಿಸುವುದು ಹಾಗೂ ಕೋವಿಡ್ 19 ಸೋಂಕಿನಿಂದ ಮೃತರಾದವರ ಅಂತ್ಯ ಸಂಸ್ಕಾರಕ್ಕೆ ಅಗತ್ಯವಿರುವ ವಾಹನ ವ್ಯವಸ್ಥೆ ಕಲ್ಪಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.