ತಾಯಿ ಸಾವಿನ ನೋವಲ್ಲೇ ಕೋವಿಡ್ ಸೋಂಕಿತೆಗೆ ಹೆರಿಗೆ
Team Udayavani, Jul 16, 2020, 9:55 PM IST
ಚಿಕ್ಕಮಗಳೂರು: ಕೋವಿಡ್ ಸೋಂಕಿತ ಗರ್ಭಿಣಿ ತನ್ನ ತಾಯಿಯ ಸಾವಿನ ನೋವಿನ ನಡುವೆಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಗುರುವಾರ ಜಿಲ್ಲೆಯಲ್ಲಿ ದೃಢಪಟ್ಟಿರುವ 30 ಕೋವಿಡ್ ಸೋಂಕಿತರ ಪೈಕಿ ಕಡೂರು ಪಟ್ಟಣದ ಗರ್ಭಿಣಿಯ ತಾಯಿಗೂ ಕೋವಿಡ್ ಸೋಂಕಿರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದಾರೆಂದು ತಿಳಿದು ಬಂದಿದೆ.
ತಾಯಿಗೆ ಕೋವಿಡ್ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಗರ್ಭಿಣಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕಿರುವುದು ದೃಢಪಟ್ಟಿದ್ದು, ಚಿಕ್ಕಮಗಳೂರು ನಗರದ ಕೋವಿಡ್-19 ಆಸ್ಪತ್ರೆ ವಿಶೇಷ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಗುರುವಾರ ತನ್ನ ತಾಯಿಯ ಸಾವಿನ ದುಃಖದ ನಡುವೆ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಆರೋಗ್ಯವಾಗಿದ್ದು, ತಾಯಿಗೆ ಕೋವಿಡ್ ಸೋಂಕಿರುವ ಹಿನ್ನೆಲೆಯಲ್ಲಿ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.