ರಾಜಸ್ಥಾನ: ಅನರ್ಹತೆ ನೋಟಿಸ್ ಪ್ರಶ್ನಿಸಿ ಬಂಡಾಯ ಶಾಸಕರು ಹೈಕೋರ್ಟ್‌ಗೆ
ಇಂದು ಸಂಜೆ 5ರ ವರೆಗೆ ಯಾವುದೇ ಕ್ರಮವಿಲ್ಲ
Team Udayavani, Jul 17, 2020, 6:15 AM IST
ರಾಜಸ್ಥಾನ ಹೈಕೋರ್ಟ್.
ಜೈಪುರ/ಹೊಸದಿಲ್ಲಿ: ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಗುಂಪಿನ ಬಂಡಾಯ ಅಲ್ಲಿನ ಹೈಕೋರ್ಟ್ ರಾತ್ರಿ ವಿಚಾರಣೆಗೂ ಕಾರಣವಾಗಿದೆ.
ಅನರ್ಹತೆ ನೋಟಿಸ್ ಪ್ರಶ್ನಿಸಿ ಬಂಡಾಯ ಶಾಸಕರು ಸಲ್ಲಿಸಿರುವ ಹೊಸ ಅರ್ಜಿಯ ವಿಚಾರಣೆ ಗುರುವಾರ ರಾತ್ರಿಯೇ ನಡೆಯಿತು.
ಗುರುವಾರ ಅಪರಾಹ್ನ 3 ಗಂಟೆಗೊಮ್ಮೆ, ಸಂಜೆ 5 ಗಂಟೆಗೆ ಇನ್ನೊಮ್ಮೆ ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ ಇದನ್ನು ವಿಭಾಗೀಯ ಪೀಠಕ್ಕೆ ರವಾನಿಸಿದ್ದರಿಂದ ರಾತ್ರಿ 7.30ರ ವೇಳೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಲಾಯಿತು.
ವಿಚಾರಣೆಯನ್ನು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮುಂದೂಡಿದ ನ್ಯಾಯಾಲಯವು ಅಂದು ಸಂಜೆ 5ರ ವರೆಗೆ ಸಚಿನ್ ಸಹಿತ ಯಾವುದೇ ಬಂಡಾಯ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಸ್ಪೀಕರ್‌ಗೆ ಸೂಚನೆ ನೀಡಿದೆ.
ಈ ಮಧ್ಯೆ ಸ್ಪೀಕರ್ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ಬಳಿಕ ಬಂಡಾಯ ಶಾಸಕರನ್ನು ವಾಪಸ್ ಕರೆತರುವ ಎಲ್ಲ ಯತ್ನಗಳು ಮುಗಿದಿವೆ ಎಂದು ಕಾಂಗ್ರೆಸ್ ಹೇಳಿದೆ.
ವಿಪ್‌ಗೆ ಈಗಿಲ್ಲ ಮಾನ್ಯತೆ
ವಿಪ್ ಉಲ್ಲಂಘಿಸಿದ ಮತ್ತು ಪಕ್ಷ ವಿರೋಧಿ ಚಟುವಟಿಕೆಗಾಗಿ ಸಚಿನ್ ಸಹಿತ 19 ಕಾಂಗ್ರೆಸ್ ಶಾಸಕರಿಗೆ ಅನರ್ಹತೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲಷ್ಟೇ ವಿಪ್ ಅನ್ವಯವಾಗುತ್ತದೆ ಎನ್ನುವುದು ಬಂಡಾಯ ಶಾಸಕರ ವಾದ. ಹೀಗಾಗಿ ನೋಟಿಸ್ ವಿರುದ್ಧ ಗುರುವಾರ ಬೆಳಗ್ಗೆ ಶಾಸಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಸಂಜೆ ಅರ್ಜಿ ವಿಚಾರಣೆಗೆ ಬಂದಾಗ ತರಾತುರಿಯಲ್ಲಿ ಅರ್ಜಿ ಸಲ್ಲಿಸಿರುವ ಕಾರಣ ಕೆಲವು ಅಂಶಗಳು ಬಿಟ್ಟುಹೋಗಿದ್ದು, ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು ಎಂದು ಬಂಡಾಯ ಶಾಸಕರ ಪರ ವಕೀಲರು ಕೇಳಿಕೊಂಡರು. ಒಪ್ಪಿದ ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಮತ್ತಷ್ಟು ಶಾಸಕರ ನಿರೀಕ್ಷೆ?
ಗುರುಗ್ರಾಮದ ಹೊಟೇಲ್‌ನಲ್ಲಿರುವ ಸಚಿನ್ ಪೈಲಟ್ ಬೆಂಬಲಿಗ ಶಾಸಕರು ಗುರುವಾರ ರಾತ್ರಿ ವಾಸ್ತವ್ಯ ಬದಲಿಸಿದ್ದಾರೆ. ಇನ್ನಷ್ಟು ಶಾಸಕರು ಬರಬಹುದು ಎಂಬ ನಿರೀಕ್ಷೆಯಲ್ಲಿ ಹೆಚ್ಚಿನ ಕೊಠಡಿಗಳನ್ನು ಕಾದಿರಿಸಲಾಗಿದೆ ಎನ್ನಲಾಗುತ್ತಿದೆ.
ವರವಾಗಲಿದೆಯೇ ಕರ್ನಾಟಕದ ತೀರ್ಪು?
2011ರ ಕರ್ನಾಟಕದ ಪ್ರಕರಣದಲ್ಲಿ ಸು.ಕೋ. ನೀಡಿರುವ ತೀರ್ಪು ಬಂಡಾಯ ಶಾಸಕರಿಗೆ ವರವಾಗಬಹುದು ಎನ್ನುವುದು ತಜ್ಞರ ಅಭಿಪ್ರಾಯ. ಅಂದು ಸಿಎಂ ಬಿಎಸ್‌ವೈ ವಿರುದ್ಧ ಬಂಡಾಯವೆದ್ದಿದ್ದ 11 ಬಿಜೆಪಿ ಶಾಸಕರ ಅನರ್ಹತೆಯನ್ನು ಸು.ಕೋ. ವಜಾ ಮಾಡಿತ್ತು. ಸಿಎಂ ಮೇಲೆ ವಿಶ್ವಾಸವಿಲ್ಲ ಎಂದು ಶಾಸಕರು ಅಭಿಪ್ರಾಯಪಟ್ಟದ್ದಕ್ಕಾಗಿ ಅನರ್ಹಗೊಳಿಸಲಾಗದು ಎಂದಿತ್ತು.
ರಾಜಸ್ಥಾನದಲ್ಲೂ ಪೈಲಟ್ ನೇತೃತ್ವದ ತಂಡವು ಬೇರೆ ಪಕ್ಷವನ್ನು ಬೆಂಬಲಿಸುವ ಅಥವಾ ಬಿಜೆಪಿಗೆ ಸೇರುವುದಾಗಿ ಹೇಳಿಲ್ಲ. ಕಳೆದ ವರ್ಷವೂ ಕಾಂಗ್ರೆಸ್ – ಜೆಡಿಎಸ್‌ನ 15 ಬಂಡಾಯ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲೇಬೇಕೆಂದು ಒತ್ತಡ ಹೇರುವಂತಿಲ್ಲ ಎಂದು ಸು. ಕೋ. ತೀರ್ಪು ನೀಡಿತ್ತು. ಈ ತೀರ್ಪು ಪರಿಗಣಿಸಿದರೆ ಪೈಲಟ್ ತಂಡಕ್ಕೆ ಜಯ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.