ಕರಾವಳಿ ಭಾಗದಲ್ಲಿ ಮುಂಗಾರು ಚುರುಕು: ವಿವಿಧೆಡೆ ಉತ್ತಮ ಮಳೆ

Team Udayavani, Jul 17, 2020, 6:30 AM IST

ಕರಾವಳಿ ಭಾಗದಲ್ಲಿ ಮುಂಗಾರು ಚುರುಕು: ವಿವಿಧೆಡೆ ಉತ್ತಮ ಮಳೆ

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ.

ದ.ಕ., ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ.

ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.

ಬಂಟ್ವಾಳ, ಕನ್ಯಾನ, ವಿಟ್ಲ, ಬೆಳ್ತಂಗಡಿ, ಧರ್ಮಸ್ಥಳ, ಮಡಂತ್ಯಾರು, ವೇಣೂರು, ಕಡಬ, ಉಪ್ಪಿನಂಗಡಿ, ಪುತ್ತೂರು, ಉಪ್ಪಿನಂಗಡಿ, ಸುರತ್ಕಲ್‌, ಮೂಡುಬಿದಿರೆ, ಮೂಲ್ಕಿ, ಬಜಪೆ, ಪಣಂಬೂರು ಸೇರಿದಂತೆ ಜಿಲ್ಲೆಯ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆಯಾಗಿದೆ.

ಉಡುಪಿಯಲ್ಲಿ ಸಾಯಂಕಾಲ ಭಾರೀ ಮಳೆಯಾಗಿದೆ. ಕಾಪು, ಪಡುಬಿದ್ರಿ, ಬೆಳ್ಮಣ್‌ ಕಾರ್ಕಳ, ಹಿರಿಯಡ್ಕ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಗಂಗೊಳ್ಳಿ, ಸೇರಿದಂತೆ ವಿವಿಧೆಡೆ ರಾತ್ರಿ ಉತ್ತಮ ಮಳೆ ಸುರಿದಿದೆ.
ಮಳೆಯಿಂದಾಗಿ ಕಾರ್ಕಳದ ಎಳ್ಳಾರೆ ಗ್ರಾಮದ ಶಾಂತಾ ಬಾಯಿ ಅವರ ಮನೆ ಭಾಗಶಃ ಹಾನಿಯಾಗಿ 50,000 ರೂ. ನಷ್ಟ ಸಂಭವಿಸಿದೆ. ಅದೇ ಗ್ರಾಮದ ಕೃಷ್ಣ ನಾಯಕ ಅವರ ಬೆಳೆ ಹಾನಿಯಾಗಿದ್ದು, 31,000 ರೂ. ನಷ್ಟ ಅಂದಾಜಿಸಲಾಗಿದೆ.

ಆಗುಂಬೆ: 14 ಸೆಂ.ಮೀ. ಮಳೆ
ಗುರುವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂಗಾರು ಬಿರುಸಾಗಿದ್ದರೆ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ಈ ಅವಧಿಯಲ್ಲಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಯಿತು. ಆಗುಂಬೆಯಲ್ಲಿ 14 ಸೆಂ.ಮೀ. ಮಳೆಯಾಗಿದ್ದು, ಇದು ರಾಜ್ಯದ ಅತ್ಯಧಿಕವಾಗಿತ್ತು.

ಈ ಅವಧಿಯಲ್ಲಿ ವಿವಿಧೆಡೆ ಸುರಿದ ಮಳೆ ಪ್ರಮಾಣ ಹೀಗಿದೆ (ಸೆಂ.ಮೀ.ಗಳಲ್ಲಿ):
ಕಲಬುರಗಿ 11, ಕಾರ್ಕಳ 10, ಶಿರಾಲಿ, ಉಡುಪಿ 9, ಕುಂದಾಪುರ, ಕೊಲ್ಲೂರು, ಕೋಟ, ಹೊನ್ನಾವರ, ಭಾಗಮಂಡಲ ತಲಾ 8, ಮಾಣಿ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಶೃಂಗೇರಿ, ಮಡಿಕೇರಿ ತಲಾ 7, ಉಪ್ಪಿನಂಗಡಿ, ಬೆಳ್ತಂಗಡಿ, ಮೂಡುಬಿದಿರೆ, ಸಿದ್ದಾಪುರ, ಹೊಸನಗರ, ಮೂರ್ನಾಡು ತಲಾ 6, ಸುಬ್ರಹ್ಮಣ್ಯ, ಪುತ್ತೂರು, ಧರ್ಮಸ್ಥಳ, ಜಯಪುರ ತಲಾ 5, ತಾಳಗುಪ್ಪ, ತಲಾ 4, ಮೂಲ್ಕಿ, ವಿರಾಜಪೇಟೆ, ಸೋಮವಾರಪೇಟೆ ತಲಾ 3, ಹಾರಂಗಿ, ಚಿಂತಾಮಣಿ, ಯಗಟಿ ತಲಾ 2, ಕುಶಾಲನಗರ, ಚಿಕ್ಕಮಗಳೂರು, ಭದ್ರಾವತಿ, ಕಡೂರು ತಲಾ 1.

ಶನಿವಾರ ಮುಂಜಾನೆಯ ವರೆಗಿನ 48 ತಾಸುಗಳ ಅವಧಿಯಲ್ಲಿ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಕರಾವಳಿಯಲ್ಲಿ ಜು.17 ಮತ್ತು 18ರಂದು ಎಲ್ಲೊ, ಜು. 19 ಮತ್ತು 20ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸಮುದ್ರ ಪ್ರಕ್ಷುಬ್ಧವಿರಲಿದ್ದು, ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಸಿದೆ. ನೆರೆಯ ಕಾಸರಗೋಡು ಜಿಲ್ಲೆಯಲ್ಲೂ ಜು. 16ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಟಾಪ್ ನ್ಯೂಸ್

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.