ವಿದ್ಯಾರ್ಥಿನಿ ಕನಸು ಕಮರಿಸಿದ ಬ್ಲಡ್‌ ಕ್ಯಾನ್ಸರ್‌

ಪಿಯುಸಿ ವಿಜ್ಞಾನ ವಿಭಾಗದ ಐದು ಪರೀಕ್ಷೆಗೆ ಹಾಜರಾಗಿದ್ದ ಅನುಷಾ

Team Udayavani, Jul 17, 2020, 9:56 AM IST

dg-tdy-1

ದಾವಣಗೆರೆ: ಆ ಬಾಲಕಿಗೆ ವೈದ್ಯಳಾಗಿ ಜನಸೇವೆ ಮಾಡಬೇಕು ಎಂಬ ಅದಮ್ಯ ಬಯಕೆ ಇತ್ತು. ಕಂಡಂತಹ ಕನಸು ನನಸಾಗಿಸಿಕೊಳ್ಳಲು ಪರಿಶ್ರಮಪಟ್ಟು ಓದುತ್ತಿದ್ದಳು. ಅದಕ್ಕೆ ತಕ್ಕಂತೆ ಅಂಕ ಗಳಿಕೆ. ದ್ವಿತೀಯ ಪಿಯುಸಿಯ 5 ವಿಷಯದಲ್ಲಿ ಬಹಳ ಚೆನ್ನಾಗಿಯೇ ಬರೆದಿದ್ದಳು. ಆದರೆ ಅಂತಿಮ ಪರೀಕ್ಷೆ ಬರೆಯಲು, ಗಳಿಸಿದ ಅಂಕಗಳನ್ನು ನೋಡುವುದಕ್ಕೆ ಅವಳೇ ಇರಲಿಲ್ಲ!

ಕರುಣಾಜನಕ ಕಥೆಯ ದುರಂತ ನಾಯಕಿ ದಾವಣಗೆರೆಯ ಸಿದ್ಧಗಂಗಾ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಬಿ. ಅನುಷಾ. ಹಾಸ್ಟೆಲ್‌ನಲ್ಲಿದ್ದುಕೊಂಡು ಅಭ್ಯಾಸ ಮಾಡುತ್ತಿದ್ದಳು. ಬಹಳ ಮೃದು ಸ್ವಭಾವದ ಹುಡುಗಿ. ಯಾರೊಡನೆಯೂ ಹೆಚ್ಚು ಮಾತಿಲ್ಲ. ತಾನಾಯಿತು, ತನ್ನ ಓದಾಯಿತು ಎಂಬಂತೆ ಇದ್ದಳು. ಎಲ್ಲಾ ಟೆಸ್ಟ್‌ ಮತ್ತು ಪೂರ್ವಭಾವಿ ಪರೀಕ್ಷೆಯಲ್ಲಿ 90ಕ್ಕಿಂತ ಹೆಚ್ಚು ಅಂಕ ಪಡೆಯುತ್ತಿದ್ದಳು.

ಮಾ.18ರಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5 ವಿಷಯಗಳಿಗೆ ಹಾಜರಾದಳು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇಂಗ್ಲಿಷ್‌ ಪರೀಕ್ಷೆ ನಡೆಯದ ಕಾರಣ ಹಾಸ್ಟೆಲ್‌ ಮಕ್ಕಳು ಅವರವರ ಊರಿಗೆ ಹೊರಟರು. ಅನುಷಾ ತನ್ನ ಊರಾದ ಚನ್ನಗಿರಿಯ ತಾಳಿಕಟ್ಟೆಗೆ ತೆರಳಿದಳು. ಏಪ್ರಿಲ್‌ ತಿಂಗಳಲ್ಲಿ ಅನುಷಾಳ ಆರೋಗ್ಯದಲ್ಲಿ ಏರುಪೇರಾಯಿತು. ರೈತಾಪಿ ಕುಟುಂಬದ ಬಸವರಾಜಪ್ಪ ಮತ್ತು ಮಂಜಮ್ಮ ದಂಪತಿ ಕಂಗಾಲಾದರು. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ತೋರಿಸಿದರು. ಎಲ್ಲಾ ಪರೀಕ್ಷೆ ನಡೆಸಿದ ವೈದ್ಯರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದರು. ವಿವಿಧ ಪರೀಕ್ಷೆಗಳ ನಂತರ ಅನುಷಾಗೆ ಬ್ಲಿಡ್‌ ಕ್ಯಾನ್ಸರ್‌ ಇರುವುದು ಪತ್ತೆಯಾಯಿತು.

ಅನಾರೋಗ್ಯದಲ್ಲೂ ಪರೀಕ್ಷೆಗೆ ಸಿದ್ಧತೆ: ಬ್ಲಡ್‌ ಕ್ಯಾನ್ಸರ್‌ ಚಿಕಿತ್ಸೆಯ ನಡುವೆಯೂ ಪರೀಕ್ಷೆಗೆ ತಯಾರಿ ನಡೆಸಿದ್ದಳು. ಸಿದ್ಧಗಂಗಾ ಯೂಟ್ಯೂಬ್‌ ಚಾನೆಲ್‌ ಮೂಲಕ ಕಳಿಸುತ್ತಿದ್ದ ಆನ್‌ಲೈನ್‌ ತರಗತಿಗಳನ್ನು ಬಿಡದೆ ವೀಕ್ಷಿಸುತ್ತಿದ್ದಳು. ಕಾಲೇಜು ನಿರ್ದೇಶಕ ಡಾ| ಡಿ.ಎಸ್‌. ಜಯಂತ್‌ ಅವರೊಡನೆ ದೂರವಾಣಿ ಸಂಪರ್ಕದಲ್ಲಿದ್ದಳು. ಅವರೂ ಸಾಕಷ್ಟು ಧೈರ್ಯ ತುಂಬುತ್ತಿದ್ದರು. ಬ್ಲಡ್‌ ಕ್ಯಾನ್ಸರ್‌ ನಡುವೆಯೂ ಪರೀಕ್ಷೆ ಬರೆಯುವ ಅದಮ್ಯ ಆಸೆ ಅವಳಲ್ಲಿತ್ತು. ನೀಟ್‌ ಪರೀಕ್ಷೆಗೂ ಸಿದ್ಧವಾಗುತ್ತಿದ್ದಳು. ಆರೋಗ್ಯವೂ ತುಸು ಚೇತರಿಕೆ ಕಂಡಿತ್ತು. ಜೂ.18ಕ್ಕೆ ಇಂಗ್ಲಿಷ್‌ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆ ಮುನ್ನಾ ದಿನವೇ ಅನುಷಾ ಅಸುನೀಗಿದಳು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ವೈದ್ಯಕೀಯ ಕೋರ್ಸ್‌ ಸೇರಿ ಮುಂದೆ ಒಳ್ಳೆಯ ಡಾಕ್ಟರ್‌ ಆಗಬೇಕು. ಸಮಾಜ ಸೇವೆ ಮಾಡಬೇಕು ಎಂಬ ಅನುಷಾ ಕನಸು ಕಮರಿ ಹೋಗಿದೆ. ಅಸುನೀಗುವ ಮುನ್ನ ಅನುಷಾ ಬರೆದಿದ್ದ ಪರೀಕ್ಷೆಯಲ್ಲಿ ಕನ್ನಡದಲ್ಲಿ 92, ಭೌತಶಾಸ್ತ್ರದಲ್ಲಿ 91, ರಸಾಯನಶಾಸ್ತ್ರದಲ್ಲಿ 89, ಗಣಿತದಲ್ಲಿ 100ಕ್ಕೆ 100, ಜೀವಶಾಸ್ತ್ರದಲ್ಲಿ 95 ಅಂಕಗಳು ಬಂದಿವೆ. ಆದರೆ ಅದನ್ನು ಕಣ್ತುಂಬಿಕೊಳ್ಳಲು ಅನುಷಾಳೇ ಇಲ್ಲ

ಬೆಳೆಯುತ್ತಿದ್ದ ಸಿರಿ ಮುರುಟಿ ಹೋಯ್ತು : ವೈದ್ಯಳಾಗುವ ಕನಸು ಕಾಣುತ್ತಿದ್ದ ಅನುಷಾಳ ಕನಸು ಅರ್ಧದಲ್ಲೇ ಮುರುಟಿ ಹೋಯಿತು. ಹೆತ್ತವರ ಒಡಲಿಗೆ ಕೊಳ್ಳಿ ಇಟ್ಟಂತಾಯಿತು. ಬಾರದ ಮಗಳಿಗಾಗಿ ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ತಂದೆ-ತಾಯಿಯನ್ನು ಸಮಾಧಾನಿಸುವ ಶಬ್ದಗಳು ಯಾರಲ್ಲೂ ಇಲ್ಲ. ಬೆಳೆಯುತ್ತಿದ್ದ ಸಿರಿಯನ್ನು ಮೊಳಕೆಯಲ್ಲೇ

ಚಿವುಟಿ ಹಾಕಿದ ವಿಧಿಯ ಅಟ್ಟಹಾಸಕ್ಕೆ ಎಲ್ಲರೂ ತಲೆಬಾಗಬೇಕು. ಅನುಷಾಳ ಆತ್ಮಕ್ಕೆ ಶಾಂತಿ ಸಿಗಲಿ. ತಂದೆ-ತಾಯಿ ದುಃಖ ಶಮನವಾಗಲಿ ಎಂದು ಎಲ್ಲರ ಪರವಾಗಿ ಆಶಿಸೋಣ ಎನ್ನುತ್ತಾರೆ ಸಿದ್ಧಗಂಗಾ ವಿಜ್ಞಾನ ಪಿಯು ಕಾಲೇಜಿನ ಅನುಷಾ ಜಸ್ಟಿನ್‌ ಡಿಸೋಜಾ.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.