ದ.ಕನ್ನಡ ಜಿಲ್ಲೆಯಲ್ಲಿಂದು ಕೋವಿಡ್ ಮಹಾಸ್ಪೋಟ! 300ಕ್ಕೂ ಹೆಚ್ಚು ಪ್ರಕರಣ ಸಾಧ್ಯತೆ
Team Udayavani, Jul 17, 2020, 1:11 PM IST
ಮಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಕಾಡುತ್ತಿರುವ ಕೋವಿಡ್ 19 ಸೋಂಕು ತನ್ನ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸುವ ಲಕ್ಷಣಗಳು ಕಾಣುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುತ್ತಿರುವ ಸಾಧ್ಯತೆ ಗೋಚರಿಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 238 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿತ್ತು. ಇಂದು ಈ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಲಿದೆ ಎನ್ನಲಾಗಿದ್ದು, ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢವಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 300 ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ. ಆಘಾತಕಾರಿ ವಿಷಯವೆಂದರೆ ಪ್ರಾಥಮಿಕ ಸಂಪರ್ಕದಿಂದಲೇ ಹಲವರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇದರೊಂದಿಗೆ ILE ಮತ್ತು SARI ಪ್ರಕರಣಗಳಲ್ಲೂ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿದೆ.
ಗುರುವಾರ ಸಂಜೆಯ ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2758 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 52 ಮಂದಿ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಸದ್ಯ ಅತೀ ಹೆಚ್ಚು ಸೋಂಕಿತರಿರುವ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.