ಸೋಂಕಿತರ ಶವ ಸಂಸ್ಕಾರದಲ್ಲೂ ಎಡವಟ್ಟು

ಸಾಮಾನ್ಯ, ಸೋಂಕಿತ ಶವಗಳು ಒಟ್ಟಿಗೆ ಸಂಸ್ಕಾರ

Team Udayavani, Jul 17, 2020, 3:18 PM IST

ಸೋಂಕಿತರ ಶವ ಸಂಸ್ಕಾರದಲ್ಲೂ ಎಡವಟ್ಟು

ಸಾಂದರ್ಭಿಕ ಚಿತ್ರ

ಬೆಂಗಳೂರು: ಸೋಂಕಿನಿಂದ ಮೃತಪಟ್ಟವರು ಹಾಗೂ ಇತರೆ ಸಮಸ್ಯೆಯಿಂದ ಸಾವನ್ನಪ್ಪಿದವರು. ಇವರಿಬ್ಬರ ಅಂತ್ಯಸಂಸ್ಕಾರ ಒಂದೇ ಕಡೆ ನಡೆಯುತ್ತಿದ್ದು, ಇದು ಮತ್ತಷ್ಟು ಸೋಂಕು ಹರಡುವ ಆತಂಕ ಸೃಷ್ಟಿಸಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ಶವ ಸಂಸ್ಕಾರದ ವೇಳೆ ಅವರ ಕುಟುಂಬಸ್ಥರು ಗುಂಪು ಸೇರುತ್ತಿದ್ದು, ಇದೇ ವೇಳೆ ಕೊರೊನೇತರದಿಂದ ಮೃತಪಟ್ಟವರ ಸಂಬಂಧಿಕರೂ ಒಂದೇ ಜಾಗದಲ್ಲಿ ಏಕಕಾಲಕ್ಕೆ ಸೇರುತ್ತಿದ್ದಾರೆ. ಕೋವಿಡ್ ಮತ್ತು ಕೋವಿಡೇತರದಿಂದ ಮೃತಪಟ್ಟವರ ಶವವನ್ನೂ ಕೆಲವು ನಿಮಿಷಗಳ ಅಂತರದಲ್ಲಿ ಸುಡಲಾಗುತ್ತಿದೆ. ಅಲ್ಲದೆ, ಚಿತಾಗಾರ ಮತ್ತು ಚಿತಾಗಾರದ ಸುತ್ತ ಸಂಪೂರ್ಣ ಸ್ಯಾನಿಟೈಸ್‌ ಪ್ರತಿಬಾರಿ ಆಗುತ್ತಿಲ್ಲ. ಕೇವಲ ಹೆಸರಿಗಷ್ಟೇ ನಿರ್ದಿಷ್ಟ ಪ್ರದೇಶದಲ್ಲಿ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ನಗರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುವವರ ಸಂಖ್ಯೆ ಕಡಿಮೆ ಇದ್ದ ವೇಳೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಿಬ್ಬಂದಿಯೂ ಪಿಪಿಇ ಕಿಟ್‌ ಧರಿಸಿ ಶವಾಗಾರದ ಬಳಿ ಬಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಗರದಲ್ಲಿ ಸೋಂಕಿನಿಂದ ಮೃತಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವಾಗಲೇ ಕಂಡುಬರುತ್ತಿರುವ ಈ ಉದಾಸೀನ ಜನರಲ್ಲಿ ಆತಂಕ ಸೃಷ್ಟಿಸಿದೆ. ಬೇಡದ ದಾಖಲೆ ಕೇಳುವುದು, ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಚಿತಾಗಾರ ವ್ಯವಸ್ಥೆಯ ಕೂಗು ಕೇಳಿಬರುತ್ತಿದೆ.

ನಗರದ ಸುಮ್ಮನಹಳ್ಳಿ, ಪೀಣ್ಯ ಹಾಗೂ ಹೆಬ್ಟಾಳದ ಚಿತಾಗಾರದಲ್ಲಿ ಕೋವಿಡ್‌ ಸೋಂಕಿನಿಂದ ಮೃತ ಪಟ್ಟವರ ಶವ, ಅನಾರೋಗ್ಯ ಹಾಗೂ ವಯೋಸಹಜ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಒಂದೇ ಚಿತಾಗಾರದಲ್ಲಿ ಶವಸಂಸ್ಕಾರ ಮಾಡಲಾಗುತ್ತಿದೆ. ನಗರದಲ್ಲಿ ಸೋಂಕಿನಿಂದ ಮೃತಪಡುವವರ ಶವ ಸಂಸ್ಕಾರಕ್ಕೆ ಪ್ರತ್ಯೇಕ ಚಿತಾಗಾರವನ್ನು ಮೀಸಲಿಡುವಂತೆ ಪಾಲಿಕೆಯ ಮಾಜಿ ಆಡಳಿತ ಪಕ್ಷದ ನಾಯಕ ಎಂ. ಶಿವರಾಜ್‌ ಸೇರಿದಂತೆ ಹಲವು ಪಾಲಿಕೆ ಸದಸ್ಯರು ಮನವಿ ಮಾಡಿದ್ದರು. ಆದರೆ, ಈ ನಿಟ್ಟಿನಲ್ಲಿ ಪಾಲಿಕೆ ಯಾವುದೇ ಯೋಜನೆ ರೂಪಿಸಿಕೊಂಡಿಲ್ಲ. ಇದು ಸ್ಥಳೀಯರಲ್ಲೂ ಬೇಸರ ಹಾಗೂ ಭೀತಿ ಉಂಟುಮಾಡಿದೆ. ಸಿಬ್ಬಂದಿ ಕೊರತೆ: ಕೊರೊನಾದಿಂದ ಸಾವಿಗೀಡಾದ ಶವ ಸಾಗಿಸಲು ಸಿಬ್ಬಂದಿ ಕೊರತೆಯೂ ಉಂಟಾಗುತ್ತಿದೆ.

ಇತ್ತೀಚೆಗೆ ಮಲ್ಲಸಂದ್ರದ ವಾರ್ಡ್‌ನ ಪಾರ್ಕ್‌ವೊಂದ ರಲ್ಲಿನ ಅನಾಥ ಶವವನ್ನು ಪಿಪಿಇ ಕಿಟ್‌ ಧರಿಸಿ ಸ್ವತಃ ಪಾಲಿಕೆ ಸದಸ್ಯ ಎನ್‌. ಲೋಕೇಶ್‌ ಆ್ಯಂಬು ಲೆನ್ಸ್‌ ಮೂಲಕ ಸಾಗಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ” ಕೋವಿಡ್ ಭೀತಿಯಿಂದ ಸಿಬ್ಬಂದಿ ಕೊರತೆ ಸೃಷ್ಟಿ ಯಾಗುತ್ತಿದೆ. ಶವ ಸಾಗಿಸಲು ಸಿಬ್ಬಂದಿ ಕೊರತೆ ಇದೆ. ಆ್ಯಂಬುಲೆನ್ಸ್‌ ಚಾಲಕ ಒಬ್ಬರೇ ಇದ್ದ ಹಿನ್ನೆಲೆಯಲ್ಲಿ ನಾನೇ ಶವ ಸಾಗಿಸಲು ಸಹಕರಿಸಿದೆ’ ಎಂದು ವಿವರಿಸಿದರು.

ಬುಕಿಂಗ್‌ ಸಮಯ ವಿಸ್ತರಣೆ: ನಗರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುವವರ ಶವವನ್ನು ಚಿತಾಗಾರಕ್ಕೆ ತೆಗೆದುಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ನಿಲ್ಲಿಸಲಾಗುತ್ತಿದ್ದ ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆಯನ್ನು ರಾತ್ರಿ 10ರವರೆಗೆ ವಿಸ್ತರಿಸಲಾಗಿದೆ ಎಂದು ಪಾಲಿಕೆ ಸದಸ್ಯ ಎಂ. ಶಿವರಾಜು ಹೇಳಿದರು. ಪ್ರತಿ

ಚಿತಾಗಾರಕ್ಕೂ ನಿತ್ಯ ಅಂದಾಜು 8ರಿಂದ 10 ಕೋವಿಡೇತರ ಸಮಸ್ಯೆಯಿಂದ ಮೃತಪಡುವವರ ಶವಗಳು ಬರುತ್ತವೆ. ಈಗ ಕೋವಿಡ್ ಸೋಂಕಿನಿಂದ ಮೃತಪಡುವವರನ್ನೂ ಇಲ್ಲೇ ಭಸ್ಮ ಮಾಡುತ್ತಿರುವುದರಿಂದ ಹೊರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸ್ಯಾನಿಟೈಸರ್‌ ಹಾಗೂ ಸ್ವಚ್ಛತೆ ನಿಯಮವನ್ನು ಸಂಪೂರ್ಣವಾಗಿ ಪಾಲಿಸುತ್ತಾರೆಯೇ ಎಂದು ಪ್ರಶ್ನಿಸಿದರು.

ಆರು ತಿಂಗಳಿಂದ ವೇತನ ಇಲ್ಲ  : ಚಿತಾಗಾರದ ಸಿಬ್ಬಂದಿ ಹಣ ಕೇಳುತ್ತಾರೆ ಎಂಬ ಆರೋಪ ಕೇಳಿಬರುತ್ತಿದೆ. ಇದರಲ್ಲಿ ಪಾಲಿಕೆ ತಪ್ಪೂ ಇದೆ. ಏಕೆಂದರೆ ಬಿಬಿಎಂಪಿ ಚಿತಾಗಾರ ಹಾಗೂ ರುದ್ರಭೂಮಿಯ ಹಲವು ಸಿಬ್ಬಂದಿಗೆ ಕಳೆದ ಅಕ್ಟೋಬರ್‌ನಿಂದ ವೇತನ ಪಾವತಿಸಿಲ್ಲ. ಬಿಬಿಎಂಪಿಯ ವ್ಯಾಪ್ತಿಯಲ್ಲಿ ಒಟ್ಟು ಹತ್ತು ವಿದ್ಯುತ್‌ ಚಿತಾಗಾರ ಹಾಗೂ 52 ರುದ್ರಭೂಮಿಗಳಿವೆ. ಇದರಲ್ಲಿ ಬಹುತೇಕ ಸಿಬ್ಬಂದಿಗೆ ಕಳೆದ ಅಕ್ಟೋಬರ್‌ ನಿಂದ ಸಂಬಳವಾಗಿಲ್ಲ.

ಕೋವಿಡ್ ಪರೀಕ್ಷೆ ಮಾಡಿಸಿಲ್ಲ : ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವವನ್ನು ಇಲ್ಲಿಯೇ (ಹೆಬ್ಟಾಳ ಚಿತಾಗಾರ) ತರಲಾಗುತ್ತಿದೆ. ಆದರೆ, ಚಿತಾಗಾರದ ಸಿಬ್ಬಂದಿಗೆ ಸೋಂಕು ಪರೀಕ್ಷೆ ಮಾಡಿಸಿಲ್ಲ. ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹೆಬ್ಟಾಳ ಚಿತಾಗಾರದ ಸಿಬ್ಬಂದಿ ಎಂ.ಡಿ. ಚಂದ್ರು ದೂರಿದರು. ಅಕ್ಟೋಬರ್‌ ನಿಂದ ನಮಗೆ ವೇತನ ನೀಡಿಲ್ಲ, ಗುರುತಿನ ಚೀಟಿ ಕೊಟ್ಟಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಆರೋಗ್ಯದ ಬಗ್ಗೆ ಕನಿಷ್ಠ ಕಾಳಜಿಯನ್ನೂ ಪಾಲಿಕೆಯ ಅಧಿಕಾರಿಗಳು ತೋರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಗರದ ಚಿತಾಗಾರ ಹಾಗೂ ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ಕಾಳಜಿ ವಹಿಸುವಂತೆ ಹಾಗೂ ಸೋಂಕಿತರ ಶವ ಸಂಸ್ಕಾರಕ್ಕೆ ಹೆಚ್ಚು ಭತ್ಯೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಅವ್ಯವಸ್ಥೆಯ ಬಗ್ಗೆ ಪರಿಶೀಲಿಸಲಾಗುವುದು. ಜಗದೀಶ್‌ ಹಿರೇಮನಿ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ

ಹಿತೇಶ್‌ ವೈ

ಟಾಪ್ ನ್ಯೂಸ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.