ಅರಣ್ಯದೊಳಗಿನ ಜನವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಡಿಸಿಎಂ ಸೂಚನೆ
Team Udayavani, Jul 17, 2020, 3:56 PM IST
ಬೆಂಗಳೂರು: ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಅಧಿನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅನುಮತಿ ನೀಡಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ವಿಕಾಸಸೌಧ ದಲ್ಲಿ ಅರಣ್ಯ ಹಕ್ಕು ಅಧಿನಿಯಮ ಅನುಷ್ಠಾನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಣ್ಯ ಹಕ್ಕಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಕ್ರಮಕೈಗೊಳ್ಳಬೇಕು. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಾಕಿ ಇರುವ ಸಮುದಾಯ ಅರಣ್ಯ ಹಕ್ಕು ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ 123 ಎಕರೆ ಜಮೀನನ್ನು ಉದ್ದೇಶಿತ ಯೋಜನೆಗಾಗಿ ಸದ್ಬಳಕೆಯಾಗುವಂತೆ ಕ್ರಮಕೈಗೊಳ್ಳಬೇಕು. ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಸುಗಮವಾಗಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ಬಾಗಲಕೋಟೆ ಜಿಲ್ಲೆಯ ಮುಧೋಳ್, ಬೀಳಗಿ ಹಾಗು ಜಮಖಂಡಿ ತಾಲೂಕುಗಳಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಸಿರುವವರ ಜಮೀನುಗಳಲ್ಲಿ ಪಾಲಿಗಾನ್ಸ್ ಒದಗಿಸುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ ನಾಯಕ್, ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆಯ ಸಲಹೆಗಾರರಾದ ಶ್ರೀ ಇ.ವೆಂಕಟಯ್ಯ, ಅರಣ್ಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶ್ರೀ ಸಂದೀಪ ದವೆ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶ್ರೀ ಸಂಗಪ್ಪ, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ಶ್ರೀ ವಿ.ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.