ಹಗರಣದಿಂದ ಎಲ್‌ಡಿಎಫ್ ಸರಕಾರದ ವರ್ಚಸ್ಸಿಗೆ ಕಳಂಕ

ಚಿನ್ನ ಪ್ರಕರಣ ವಿರುದ್ಧ ಸಿಪಿಎಂ ಆಕ್ರೋಶ; ವಿವಾದವನ್ನು ಎದುರಿಸಲು ಸಿಎಂ ಕಚೇರಿ ವಿಫ‌ಲ

Team Udayavani, Jul 18, 2020, 10:16 AM IST

ಹಗರಣದಿಂದ ಎಲ್‌ಡಿಎಫ್ ಸರಕಾರದ ವರ್ಚಸ್ಸಿಗೆ ಕಳಂಕ

ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣ ಎಲ್‌ಡಿಎಫ್ ಸರಕಾರದ ವರ್ಚಸ್ಸಿಗೆ ಧಕ್ಕೆ ತಂದಿದೆ. ಅದನ್ನು ಸರಿಯಾದ ರೀತಿಯಲ್ಲಿ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ನಿಭಾಯಿಸಲಿಲ್ಲ ಎಂದು ಕೇರಳ ಸಿಪಿಎಂ ಆಕ್ಷೇಪ ಮಾಡಿದೆ. ಇದರಿಂದಾಗಿ ಪ್ರತಿಪಕ್ಷಗಳ ಟೀಕೆಯ ನಡುವೆ ಪಕ್ಷದ ನಾಯಕರಿಂದಲೇ ಟೀಕೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಎದುರಿಸುವಂತಾಗಿದೆ.

ಸಿಎಂ ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯ, ಅಜಾಗರೂಕತೆ ಇಲ್ಲಿ ಎದ್ದು ಕಾಣುತ್ತಿದೆ. ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್‌ ಅವರ ವ್ಯವಹಾರಗಳ ಬಗ್ಗೆ ಸರಕಾರ ಸರಿಯಾದ ಮೇಲ್ವಿಚಾರಣೆ ನಡೆಸಲಿಲ್ಲ. ಕೋವಿಡ್ ಸಾಂಕ್ರಾಮಿಕವನ್ನು ಸಮರ್ಥವಾಗಿ ನಿರ್ವಹಿಸಿ, ಗಳಿಸಿಕೊಂಡಿದ್ದ ಸರಕಾರದ ಮರ್ಯಾದೆ ಈ ಪ್ರಕರಣದಿಂದಾಗಿ ಹಾಳಾಯಿತು. ಪ್ರತಿಪಕ್ಷಗಳ ಟೀಕೆಗೆ ಗ್ರಾಸವಾಯಿತು ಎಂದು ಹರಿಹಾಯ್ದಿದೆ. ಇನ್ನು ಮುಂದೆ, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸರಕಾರಕ್ಕೆ ತಾಕೀತು ಮಾಡಿದೆ.

ಅರೆ ಪ್ರಜ್ಞಾಹಿನ ಸ್ಥಿತಿಯಲ್ಲಿ ಅಧಿಕಾರಿ: ಈ ಮಧ್ಯೆ, ಯುಎಇ ರಾಯಭಾರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇರಳ ಪೊಲೀಸ್‌ ಅಧಿಕಾರಿ, ಜೈಘೋಷ್‌ ಎಂಬವರು ತಮ್ಮ ಮನೆಯ ಸಮೀಪ ಅರೆಪ್ರಜ್ಞಾ ಹೀನ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿಯಿಂದ ಅವರು ನಾಪತ್ತೆಯಾಗಿದ್ದರು. ಮನೆಯಿಂದ 150 ಮೀಟರ್‌ ದೂರದಲ್ಲಿರುವ ದಟ್ಟವಾದ ಪೊದೆಯ ಮಧ್ಯೆ ಅವರು ಪತ್ತೆಯಾಗಿದ್ದು, ಕೈಗೆ ಗಾಯವಾಗಿದೆ. ಬಹುಶ: ಮಣಿಕಟ್ಟನ್ನು ಕೊಯ್ದು ಕೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೇ ವೇಳೆ ಕಳ್ಳಸಾಗಣೆಯಾಗಿರುವ ಚಿನ್ನ ಕಲ್ಲಿಕೋಟೆಯ ಚಿನ್ನಾಭರಣ ಮಳಿಗೆಗಳಿಗೆ ಹಂಚಿಕೆಯಾಗಿರುವ ಸಾಧ್ಯತೆ ಎಂದು ಕಸ್ಟಮ್ಸ್‌ ಇಲಾಖೆ ಪತ್ತೆ ಹಚ್ಚಿದೆ. ಈ ಬಗ್ಗೆ ಇಲಾಖೆ ಮಲಪ್ಪುರಂ ನಿವಾಸಿಯೊಬ್ಬನನ್ನು ಬಂಧಿಸಲಾಗಿದೆ. ಎನ್‌ಐಎ ವಶದಲ್ಲಿರುವ ಚಿನ್ನ ಕಳ್ಳಸಾಗಣೆಯ ರೂವಾರಿ ಸ್ವಪ್ನಾ ಸುರೇಶ್‌ಳನ್ನು ನೇಮಕ ಮಾಡುವುದರಲ್ಲಿ ಅಮಾನತಾಗಿರುವ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್‌ ಪ್ರಧಾನ ಪಾತ್ರವಹಿಸಿದ್ದರು ಎಂದು ಮುಖ್ಯ ಕಾರ್ಯದರ್ಶಿ ನೇತೃತ್ವದ ತನಿಖಾ ಸಮಿತಿ ಹೇಳಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.