ಅಪಘಾತವೆಂಬಂತೆ ಬಿಂಬಿಸಿ ಕೊಲೆ ಯತ್ನ ; ಮೂವರು ಆರೋಪಿಗಳ ಬಂಧನ
Team Udayavani, Jul 18, 2020, 10:40 AM IST
ಸಾಂದರ್ಭಿಕ ಚಿತ್ರ
ಬೆಳ್ತಂಗಡಿ: ವ್ಯವಹಾರವೊಂದರ ವಿಚಾರದಲ್ಲಿ ಅಪಘಾತವೆಂಬಂತೆ ಬಿಂಬಿಸಿ ಕೊಲೆ ಮಾಡಲೆತ್ನಿಸಿದ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೊಡಗು ಜಿಲ್ಲೆಯ ಶನಿವಾರ ಸಂತೆ ನಂದಿಗುಂದ ಪ್ರದೀಪ ಸಿ.ಜಿ., ವರುಣ್ ಬುದಮಾರು, ಕಿಶೋರ್ ಹಾಗೂ ಅಭಿ ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯ ಶನಿವಾರ ಸಂತೆಯ ನಂದೀಶ್ ಎಚ್.ಎನ್. ಹಾಗೂ ಆರೋಪಿತ ಪ್ರದೀಪ್ ಸಿ.ಜಿ. ಗ್ರಾನೈಟ್ ವ್ಯವಹಾರದ ಪಾಲು ದಾರರಾಗಿದ್ದರು. ನಂದೀಶ್ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ವರಣ್ ಮತ್ತು ಕಿಶೋರ್ ಜತೆಗೂಡಿ ಜೂ. 8ರಂದು ಮುಂಜಾನೆ ಗುರುವಾಯನಕೆರೆ ಕುಲಾಲ ಮಂದಿರದ ಬಳಿ ಕಾರನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಅಪಘಾತ ನಡೆಸಿದ್ದರು. ಇದರಿಂದ ಕಾಲಿಗೆ, ಕೈ, ತಲೆಗೆ ಗಾಯವಾಗಿತ್ತು. ಅಭಿ ಅವರ ಮೂಲಕ ಅಪಘಾತ ನಡೆಸಿದ ವಾಹನವನ್ನು ಸ್ಕ್ರ್ಯಾಫ್ಗೆ ನೀಡಿ ಬಿಡಿ ಭಾಗಗಳನ್ನು ಬದಲಾಯಿಸಿ ಸಾಕ್ಷ್ಯ ನಾಶ ಮಾಡಿದ್ದರು ಎನ್ನಲಾಗಿದೆ. ನಂದೀಶ್ ಅವರು ಸಂಚಾರಿ ಠಾಣೆಯಲ್ಲಿ ನೀಡಿದ ದೂರಿನಂತೆ ನ್ಯಾಯಾಲಯ ಹಾಗೂ ಬಂಟ್ವಾಳ ಡಿವೈಎಸ್ಪಿ ಅವರ ಆದೇಶದಂತೆ ಬೆಳ್ತಂಗಡಿ ಠಾಣೆಗೆ ವರ್ಗಾವಣೆಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಗೆ ಕೋವಿಡ್
ಈ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಜು. 16ರಂದು ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಈಗಿನ ನಿಯಮದಂತೆ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಬಂಧಿತ 4 ಮಂದಿ ಆರೋಪಿಗಳಲ್ಲಿ 3 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.