ಆಯಾ ತಾಲೂಕಿನಲ್ಲೇ ಚಿಕಿತ್ಸಾ ಕೇಂದ್ರ
Team Udayavani, Jul 18, 2020, 12:03 PM IST
ಗಜೇಂದ್ರಗಡ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ತಾಲೂಕು ಕೇಂದ್ರದಲ್ಲಿ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಸೋಂಕಿತರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಪಟ್ಟಣದಲ್ಲಿ ಕೋವಿಡ್-19 ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ತಹಶೀಲ್ದಾರ್ ಎ.ಬಿ. ಕಲಘಟಗಿ ಹೇಳಿದರು.
ಕುಷ್ಟಗಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದೊಂದು ವಾರದಿಂದ ಗಜೇಂದ್ರಗಡ ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈ ಹಿಂದೆ ಗದಗ ಜಿಲ್ಲಾ ಕೇಂದ್ರದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಜಿಲ್ಲಾಧಿಕಾರಿಗಳು ಆಯಾ ತಾಲೂಕು ಕೇಂದ್ರದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಿ ಎಂದು ಸೂಚಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕುಷ್ಟಗಿ ರಸ್ತೆ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ 50 ಹಾಸಿಗೆ ಹಾಗೂ ಕಾಲಕಾಲೇಶ್ವರ ಬಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ 40 ಹಾಸಿಗೆಯ ಕೋವಿಡ್-19 ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಈಗಾಗಲೇ ಎಲ್ಲ ವೈದ್ಯಕೀಯ ಸಿದ್ಧತೆಗಳು ನಡೆದಿವೆ. ಕೇಂದ್ರಗಳ ಸುತ್ತ ಪೊಲೀಸರನ್ನು ನಿಯೋಜಿಸಲಾಗುವುದು. ಇನ್ಮಂದೆ ತಾಲೂಕಿನ ಕೊರೊನಾ ಸೋಂಕಿತರಿಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದರು.
ಈ ವೇಳೆ ಶಿರಸ್ತೆದಾರ ವೀರಣ್ಣ ಅಡಗತ್ತಿ, ತಾಲೂಕು ಆರೋಗ್ಯಾಧಿಕಾರಿ ಮನೋಹರ ಕಣ್ಣಿ, ಗ್ರಾಮ ಲೆಕ್ಕಾಧಿಕಾರಿಗಳಾದ ಉಮೇಶ ಅರಳಿಗಿಡದ, ಶಬ್ಬೀರ ನಿಶಾನದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.