ಕಂಟೈನರ್ ನಲ್ಲಿ ಕೋವಿಡ್ ಐಸಿಯು! ಡಿಸಿಎಂ ಅಶ್ವಥ್ ನಾರಾಯಣ್ ಪರಿಶೀಲನೆ

Team Udayavani, Jul 18, 2020, 4:06 PM IST

ಕಂಟೈನರ್ ನಲ್ಲಿ ಕೋವಿಡ್ ಐಸಿಯು! ಡಿಸಿಎಂ ಅಶ್ವಥ್ ನಾರಾಯಣ್ ಪರಿಶೀಲನೆ

ಬೆಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ ’ಮಾಡ್ಯೂಲರ್ ಐಸಿಯು’ಗಳನ್ನು ಅಭಿವೃದ್ಧಿಪಡಿಸಿದೆ. ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರಿನಲ್ಲಿ ಶನಿವಾರ, ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಇವುಗಳನ್ನು ಪರಿಶೀಲನೆ ಮಾಡಿದರು.

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು.

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಿಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಯೋಗಿಕವಾಗಿ ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರುಗಳನ್ನು ಒದಗಿಸಲಾಗುವುದು. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಪ್ರತಿ ಕಂಟೈನರಲ್ಕಿ 5 ಹಾಸಿಗೆಗಳು ಇರುತ್ತವೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು ಎಂದು ಡಿಸಿಎಂ ಹೇಳಿದರು.

ಕಂಟೈನರ್ ನಲ್ಲಿ ಕೋವಿಡ್ ಐಸಿಯು! ಡಿಸಿಎಂ ಅಶ್ವಥ್ ನಾರಾಯಣ್ ಪರಿಶೀಲನೆ

ಇದರಲ್ಲಿ ಏನೇನಿರುತ್ತದೆ?

ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ.  ಆಮ್ಲಜನಕ ವ್ಯವಸ್ಥೆ ಇರುತ್ತದೆ. ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕ್ಯಾಮೆರಾ ಕೂಡ ಇದ್ದು, ಆನ್ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಪ್ರತಿ ಕಂಟೈನರ್’ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್’ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಅದು ಪ್ರತ್ಯೇಕವಾಗಿರುತ್ತದೆ. ಎಲ್ಲಿಗೆ ಬೇಕಾದರೂ ಈ ಐಸಿಯುಗಳನ್ನು ಸುಲಭವಾಗಿ ಸಾಗಿಸಿ ಇಡಬಹುದು. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ರಿನ್ಯಾಕ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.