ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ. 50 ಹಾಸಿಗೆ ಒದಗಿಸಲು ಬಿಎಸ್ ವೈ ಸೂಚನೆ

Team Udayavani, Jul 18, 2020, 6:03 PM IST

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೆ. 50 ಹಾಸಿಗೆ ಒದಗಿಸಲು ಸಿಎಂ ಬಿಎಸ್ ವೈ ಸೂಚನೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಇನ್ನೂ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಸಿಎಂ ಬಿಎಸ್ ವೈ ಚರ್ಚೆ ನಡೆಸಿದರು.

ಕೆಲವೆಡೆಗಳಲ್ಲಿ ಕೋವಿಡ್ ಹಾಗೂ ಕೋವಿಡ್ ಅಲ್ಲದ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಹಾಗೆಯೇ ಕೋವಿಡ್‍ಗೆ ಚಿಕಿತ್ಸೆ ಅಗತ್ಯವಿರುವವರು ಹಾಗೂ ಇತರ ಸಮಸ್ಯೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ದೊರೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವ ಹಾಗೂ ಹಲವರು ಪ್ರಾಣ ತ್ಯಾಗ ಮಾಡಿದ ಘಟನೆಗಳು ಮುಂದೆ ನಡೆಯಬಾರದು, ಕೋವಿಡ್ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿಯಾಗಿತ್ತು. ಮುಂದೆಯೂ ಮಾದರಿಯಾಗಿರಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಹಿಂದಿನ ಸಭೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 4,500 ಹಾಸಿಗೆಗಳು ದೊರೆಯುವುದು ಎಂದು ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಅಷ್ಟು ಸಂಖ್ಯೆಯ ಹಾಸಿಗೆಗಳನ್ನು ಒದಗಿಸದೆ ಇರುವುದು ಹಾಗೂ ಇನ್ನೂ ಅನೇಕ ಸಮಸ್ಯೆಗಳು ನಮ್ಮ ಸಚಿವರುಗಳು ಕೆಲವು ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿದಾಗ ತಿಳಿದುಬಂದಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಈ ತುರ್ತು ಸಂದರ್ಭದಲ್ಲಿ ಮಾನವೀಯತೆಯಿಂದ ಕೋವಿಡ್ ಚಿಕಿತ್ಸೆಗೆ ಸಹಕರಿಸಬೇಕು. ಕೋವಿಡ್ ಇಲ್ಲದ ಇತರ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸದೆ, ರಾಜ್ಯದ ವೈದ್ಯಕೀಯ ವ್ಯವಸ್ಥೆಯಲ್ಲಿ ಸಮತೋಲನ ಇರುವಂತೆ ಎಚ್ಚರ ವಹಿಸಬೇಕು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸಲಹೆ ಮಾಡಿದರು.

ಇದಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು ಹಾಸಿಗೆಗಳನ್ನು ನಾಳೆಯಿಂದಲೇ ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಮವೈದ್ಯರು, ನರ್ಸ್ ಗಳ ಕೊರತೆ ಇದ್ದರೆ, ಸರ್ಕಾರವೇ ನೇಮಕ ಮಾಡುವುದು. ಯಾವುದೇ ರೀತಿಯ ಬೆಂಬಲ ಅಗತ್ಯವಿದ್ದರೂ ಸರ್ಕಾರ ನೀಡಲಿದೆ ಎಂದು ಸಿಎಂ ಭರವಸೆ ನೀಡಿದರು.

ಇದಕ್ಕೆ ಸ್ಪಂದಿಸಿದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು, ಇನ್ನು ಕೆಲ ಕಾಲೇಜುಗಳು ಶೇ. 80 ರಷ್ಟು ಹಾಸಿಗೆಗಳನ್ನು ನೀಡುವುದಾಗಿ ಹಾಗೂ ಲಭ್ಯವಿರುವ ವೆಂಟಿಲೇಟರ್ ಗಳನ್ನು ಸಹ ಒದಗಿಸುವುದಾಗಿ ತಿಳಿಸಿದರು.

ಇನ್ನು‌ ಕಾಲೇಜುಗಳ ಬೆಡ್ ಗಳ ಮೇಲೆ‌ ನಿಗಾ ಇಡಲು‌ ಅಧಿಕಾರಿಗಳನ್ನು‌‌ ಈಗಾಗಲೇ ನೇಮಕ‌ ಮಾಡಲಾಗಿದೆ. ಸಭೆಗೆ ಹಾಜರಾಗದ ವೈದೇಹಿ ವೈದ್ಯಕೀಯ ಕಾಲೇಜಿಗೆ ನೋಟಿಸ್ ನೀಡಲು ಸೂಚಿಸಲಾಯಿತು

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.