ಶನಿವಾರ 4,537 ಮಂದಿಗೆ ಸೋಂಕು: 59ಸಾವಿರಕ್ಕೇರಿದ ಒಟ್ಟು ಪ್ರಕರಣ; ಸಾವಿನ ಸಂಖ್ಯೆಯಲ್ಲೂ ಏರಿಕೆ
Team Udayavani, Jul 19, 2020, 6:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಶನಿವಾರ 4,537 ಮಂದಿಗೆ ದೃಢಪಟ್ಟಿದೆ. 93 ಮಂದಿ ಸಾವನ್ನಪ್ಪಿದ್ದಾರೆ. 1,018 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 2,125 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ರಾಜಧಾನಿಯೊಂದರಲ್ಲೇ 49 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಈವರೆಗೆ ಒಟ್ಟು 59,652 ಮಂದಿಗೆ ಕೋವಿಡ್ 19 ದೃಢಪಟ್ಟಿದ್ದು, ಇದುವರೆಗೆ 21,775 ಮಂದಿ ಗುಣಮುಖರಾಗಿದ್ದಾರೆ.
36,631 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 1,240 ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ.
ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮತ್ತು ಇತರ ಪರೀಕ್ಷೆ ಸೇರಿಸಿ ಶುಕ್ರವಾರ ಸಂಜೆಯಿಂದೀಚೆಗೆ 34,819 ಮಂದಿಯನ್ನು ಪರೀಕ್ಷಿಸಲಾಗಿದೆ.
ಶನಿವಾರ ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳಲ್ಲಿ ತಲಾ ನೂರಕ್ಕೂ ಅಧಿಕ ಮಂದಿಗೆ ಸೋಂಕು ಪತ್ತೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ 29,621 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 6,540 ಮಂದಿ ಗುಣಮುಖರಾಗಿದ್ದಾರೆ.
ಜಗತ್ತು: 6 ಲಕ್ಷ ದಾಟಿದ ಮೃತರ ಸಂಖ್ಯೆ
ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಶನಿವಾರ 6 ಲಕ್ಷದ ಗಡಿ ದಾಟಿದ್ದು, ಒಟ್ಟು ಸೋಂಕು ಪೀಡಿತರ ಸಂಖ್ಯೆ 1 ಕೋಟಿಯ 42 ಲಕ್ಷಕ್ಕೆ ಮುಟ್ಟಿದೆ.
ದೇಶದಲ್ಲಿ ಪ್ರಕರಣಗಳ ಸಂಖ್ಯೆ 10.55 ಲಕ್ಷ ದಾಟಿದೆ. ಇದೇ ವೇಳೆ ಗುಣಮುಖ ಪ್ರಮಾಣವೂ ಏರುಗತಿಯಲ್ಲಿದ್ದು, 6 ಲಕ್ಷದ 50 ಸಾವಿರಕ್ಕಿಂತಲೂ ಹೆಚ್ಚು ಮಂದಿ ಇದುವರೆಗೆ ಕೋವಿಡ್ 19 ವಿರುದ್ಧ ಗೆಲುವು ಸಾಧಿಸಿದ್ದಾರೆ.
ನಾಳೆ ಬೆಳಗ್ಗಿನ ತನಕ ಲಾಕ್‌ಡೌನ್
ರಾಜ್ಯಾದ್ಯಂತ ಶನಿವಾರ ರಾತ್ರಿಯಿಂದ ಕರ್ಫ್ಯೂ ಚಾಲ್ತಿಯಲ್ಲಿದ್ದು, ಸೋಮವಾರ ಬೆಳಗಿನ ತನಕ ಸಂಪೂರ್ಣ ಲಾಕ್‌ಡೌನ್ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಈಗಾಗಲೇ ಮೂರು ದಿನಗಳಿಂದ ಜಾರಿಯಲ್ಲಿದೆ.
ಜಾಗತಿಕ ಸೋಂಕು ಪೀಡಿತರ ಸಂಖ್ಯೆ : 1,42,76,589
ಒಟ್ಟು ಸಾವು (ಜಗತ್ತು): 6,01,174
ಕರ್ನಾಟಕ (ಸೋಂಕು): 59,652
ಭಾರತ (ಸೋಂಕು): 10,55,932
ಸಾವು (ಭಾರತ): 26,508
ಚೇತರಿಕೆ: 6,54,612
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.