ಪ್ರತಿಯೊಬ್ಬರೂ ಕೋವಿಡ್ ಬಗ್ಗೆ ಜಾಗೃತರಾಗಿ
Team Udayavani, Jul 19, 2020, 10:00 AM IST
ಮಂಡ್ಯ: ಜಿಲ್ಲೆಯ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಾಗ ಕೋವಿಡ್ ನಿಯಂತ್ರಣ ಮಾಡಿಕೊಳ್ಳಬಹುದು. ಮಾರಣಾಂತಿಕವಾಗಿ ಆಗುವ ದುಷ್ಪರಿಣಾಮ ತಡೆ ಸಾಧ್ಯವಿದೆ. ಇದರ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಹಾನಂದಿ ಗೋಶಾಲೆ ವತಿಯಿಂದ ನಡೆದ ಕೋವಿಡ್-19 ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಾನಂದಿ ಗೋಶಾಲೆ ವತಿಯಿಂದ ಕೋವಿಡ್ -19 ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿಯನ್ನು ಮೂಡಿಸಲು ವಾಹನದ ಮುಖಾಂತರ ಜಾಗೃತಿ ಹೋರಾಟ ಮಾಡುತ್ತಿದ್ದಾರೆ. ಪ್ರಸ್ತುತ ಈ ಸೋಂಕು ವಿಶ್ವ ವ್ಯಾಪಿಯಾಗಿ ಹಬ್ಬಿದ್ದು, ಮಂಡ್ಯದಲ್ಲೂ ಈಗಾಗಲೇ ನೂರಾರು ಪ್ರಕರಣಗಳು ಕಂಡು ಬಂದಿವೆ. ಪ್ರತಿಯೊಬ್ಬ ವ್ಯಕ್ತಿಯು ಕೂಡ ಕೋವಿಡ್ ಬಗ್ಗೆ ಜಾಗೃತಿಯಾಗಿರುವುದು ತುಂಬಾ ಅವಶ್ಯಕವಾಗಿದೆ ಎಂದು ಹೇಳಿದರು.
ನಮ್ಮ ಪ್ರಾಣ ನಮ್ಮ ಕೈಯಲ್ಲಿದೆ. ಈ ಕೋವಿಡ್-19 ಬಂದು ಮರಣ ಹೊಂದಿದರೆ ಬೇರೆಯವರನ್ನು ದೂರಬಾರದು. ಏಕೆಂದರೆ ನಮ್ಮ ರಕ್ಷಣೆ ನಾವು ಮಾಡಿಕೊಳ್ಳಲಿಲ್ಲವೆಂದರೆ ಅದರಿಂದ ಬಂದ ಸಾವಿಗೆ ನಾವೇ ಕಾರಣಕರ್ತರಾಗಿರುತ್ತೇವೆ. ಸ್ಯಾನಿಟೈಸರ್ ಬಳಸಬೇಕು. ಅವಶ್ಯಕತೆಯಿದ್ದಾಗ ಮಾತ್ರ ಮನೆಯಿಂದ ಹೊರಗಡೆ ಬರಬೇಕು. 6ರಿಂದ 8 ವಾರಗಳ ಕಾಲ ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿಗಳಾದ ಟಿ.ಕೆ.ಹರೀಶ್, ಅನುಪಮ ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.