ಅಂಕೋಲಾ ಜನರಿಗೆ ಕೋವಿಡ್ ಭಯವಿಲ್ಲ!
Team Udayavani, Jul 19, 2020, 12:35 PM IST
ಅಂಕೋಲಾ: ತಾಲೂಕಿನಲ್ಲಿ ಕೋವಿಡ್ ಸೋಂಕಿನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಮಾತ್ರ ಕ್ಯಾರೇ ಎನ್ನದೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಮರೆತು, ಮಾಸ್ಕ್ ಇಲ್ಲದೆ ಅಗತ್ಯ ವಸ್ತು ಖರೀದಿಯಲ್ಲಿ ತೊಡಗಿರುವುದು ಶನಿವಾರ ಕಂಡುಬಂದಿತು.
ಪಟ್ಟಣದಲ್ಲಂತು ತಾಲೂಕಿನ ಜನತೆ ಯಾವುದಕ್ಕೂ ಹೆದರದೆ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಶನಿವಾರವಂತೂ ಭಾರಿ ಸಂಖ್ಯೆಯಲ್ಲಿ ಜನರು ರಸ್ತೆಗಿಳಿದಿದ್ದರಿಂದ ಪಟ್ಟಣದಲ್ಲಿ ಜನದಟ್ಟಣೆ ಆಗಿರುವುದು ಕಂಡು ಬಂದಿತು. ಇಲ್ಲಿಯವರೆಗೆ ಅಂಕೋಲಾ ತಾಲೂಕಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಅಷ್ಟೇನಿರಲಿಲ್ಲ. ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಾದ್ಯಾಂತ ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿಯು ಪ್ರಕರಣ ಕಂಡುಬರುತ್ತಿದೆ. ಆದರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ತಾಲೂಕಿನ ಜನ ರಾಜಧಾನಿ ಬೆಂಗಳೂರಿನಲ್ಲಿ ಕೆಲಸಕ್ಕೆಂದು ಹೋದವರು ಮರಳಿ ಮನೆ ಸೇರುತ್ತಿದ್ದಾರೆ. ಅಂತವರಲ್ಲಿ ಕೆಲವರು ಮಾತ್ರ ಆರೋಗ್ಯ ಇಲಾಖೆಗೆ ತಮ್ಮ ಮಾಹಿತಿ ನೀಡಿ ಬರುತ್ತಿದ್ದು, ಇನ್ನೂ ಕೆಲವರು ಮಾಹಿತಿ ನೀಡದೆ ಮನೆ ಸೇರಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಜಧಾನಿಯಿಂದ ವಾಪಸ್ಸಾದ ಕೆಲವರಲ್ಲಿ ಸೋಂಕು ಕಂಡು ಬಂದಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕಿದೆ.
ಅಧಿಕಾರಿಗಳು ಹಾಗೂ ಪೊಲೀಸರು ಸಾಮಾಜಿಕ ಅಂತರ ಕಾಪಾಡುತ್ತಾರೆ, ಮಾಸ್ಕ್ ಧರಿಸುತ್ತಾರೆ. ಅವರು ಹೋದ ನಂತರ ನಿಯಮಗಳನ್ನು ಗಾಳಿಗೆ ತೂರುತ್ತಾರೆ. ಹೀಗಾಗಿ ಸೋಂಕು ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.