ಜಿಪಂ ಅಧ್ಯಕ್ಷ ಯಡಿಯಾಪುರ ಅಧಿಕಾರ ಸ್ವೀಕಾರ
Team Udayavani, Jul 19, 2020, 1:00 PM IST
ಯಾದಗಿರಿ: ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷ ಬಸಣ್ಣಗೌಡ ಪಾಟೀಲ ಯಡಿಯಾಪುರ ಶನಿವಾರ ತಮ್ಮ ಕಚೇರಿಯಲ್ಲಿ ಸರಳವಾಗಿ ಅಧಿಕಾರ ಸ್ವೀಕರಿಸಿದರು,
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿಗೆ ಯತ್ನಿಸುವೆ ಎಂದರು. ಜು.21ರಿಂದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಬಿಡುವುದರಿಂದ ಆ ಭಾಗದಲ್ಲಿ ಭತ್ತ ನಾಟಿ ಕಾರ್ಯ ಚುರುಕುಗೊಳ್ಳುತ್ತದೆ. ಭತ್ತ ನಾಟಿ ಮಾಡಲು ನೆರೆಯ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳದಿಂದ ಸಾವಿರಾರು ಕೂಲಿ ಕಾರ್ಮಿಕರು ಜಿಲ್ಲೆಗೆ ಆಗಮಿಸುತ್ತಾರೆ. ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನಿಂದ ಜನರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಗೆ ಆಗಮಿಸುವ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಲಾಕ್‌ಡೌನ್ ಮುಗಿದ ಬಳಿಕ ಕೃಷಿ, ಆರೋಗ್ಯ ಇಲಾಖೆ ಅ ಧಿಕಾರಿಗಳ ಸಭೆ ಕರೆದು ಚರ್ಚಿಸುವೆ ಎಂದರು.
ಉಪಾಧ್ಯಕ್ಷೆ ಗಿರಿಜಮ್ಮ ಎಸ್. ಪಾಟೀಲ ರೊಟ್ನಡಗಿ, ಸದಸ್ಯ ಕಿಶನ್ ರಾಠೊಡ, ಅಮರದೀಪ ನಾಯಕ, ಎನ್ .ಡಿ ನಾಯಕ, ಭೀಮಣ್ಣಗೌಡ ಕ್ಯಾತನಾಳ, ದೇವಿಂದ್ರಪ್ಪ ಮುನಮುಟಗಿ, ರಾಮರಡ್ಡಿ ತಂಗಡಗಿ, ರಾಚನಗೌಡ ಮುದ್ನಾಳ, ಶಾಂತಿಲಾಲ್ ರಾಠೊಡ, ಸುರೇಶ ರಾಠೊಡ, ಮಾಣಿಕರೆಡ್ಡಿ ಕುರಕುಂದಿ, ರಮೇಶ ದೊಡ್ಮನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.