ಕೋವಿಡ್ ನಿಂದ ಮೃತರಾದವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಡಿ.ಕೆ ಸುರೇಶ್
Team Udayavani, Jul 19, 2020, 5:52 PM IST
ರಾಮನಗರ: ಕೋವಿಡ್ 19 ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಕನಕಪುರದಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
ಜಿಲ್ಲೆಯ ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಮೃತರ ಅಂತ್ಯಸಂಸ್ಕಾರ ನಡೆಸಲಾಯಿತು. ಈ ವೇಳೆ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಇತ್ತೀಚೆಗೆ ಡಿಕೆ ಸುರೇಶ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಜತೆ ಮಾತನಾಡಿ ಆತ್ಮವಿಶ್ವಾಸ ತುಂಬಿಸುವ ಕೆಲಸ ಮಾಡಿದ್ದರು.
ಈ ವಿಚಾರವಾಗಿ ಇತ್ತೀಚೆಗಷ್ಟೇ ಬಹಿರಂಗ ಪತ್ರ ಬರೆದಿದ್ದ ಸಂಸದರು, ‘ಕೋವಿಡ್ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಈ ವಿಷಯದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿಡ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕು’ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.