ಅಳಿವೆಕೋಡಿ – ತಾರಾಪತಿ ಕಡಲಿನ ಅಬ್ಬರ: ಮೀನುಗಾರರ ಶೇಡ್, ತೀರದ ಕಲ್ಲುಗಳು ಸಮುದ್ರ ಪಾಲು
Team Udayavani, Jul 19, 2020, 8:13 PM IST
ಉಪ್ಪುಂದ: ಪಡುವರಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಅಳಿವೆಕೋಡಿ – ತಾರಾಪತಿ ಪ್ರದೇಶದ ಸಮುದ್ರ ತೀರದ ಕಲ್ಲಗಳು ಕಡಲಿನ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿವೆ.
ಶನಿವಾರ ರಾತ್ರಿ ಸುರಿದ ಮಳೆ ಹಾಗೂ ಕಡಲಿನ ಅರ್ಭಟಕ್ಕೆ ಅಳಿವೆಕೋಡಿ – ತಾರಾಪತಿಯದೊಂದಿ ಮನೆಯ ಸಮೀಪದ ಸಮುದ್ರ ದಡದಲ್ಲಿ ರಕ್ಷಣೆಗೆ ಹಾಕಲಾಗಿದ್ದ ಕಲ್ಲುಗಳು ಸಮುದ್ರ ಪಾಲಾಗಿದೆ.
ಸುಮಾರು 50ಮೀ.ವರೆಗೆ ತಡೆಗೋಡೆಗೆ ಹಾಕಿರುವ ಕಲ್ಲುಗಳು ಕೊಚ್ಚಿಹೋಗಿದ್ದು, ಮೀನುಗಾರರ ಒಂದು ಶೆಡ್ ಕಡಲಿನ ಪಾಲಾಗಿದೆ.
ಈ ಭಾಗದಲ್ಲಿ ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಹೆಚ್ಚಾಗುತ್ತಿದ್ದು ಹೀಗೆ ಮುಂದುವರಿದರೆ 100ಕ್ಕೂ ಹೆಚ್ಚು ಮೀನುಗಾರರ ಮನೆಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಗ್ರಾಮ ಪಂಚಾಯಿತ್ ಸದಸ್ಯ ಸುರೇಶ ಬೆಸ್ಕೂರ್ ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಕರಾವಳಿಯಲ್ಲಿ ಕಳೆದ ಎರಡು ಮೂರು ನಿರಂತರ ಭಾರೀ ಮಳೆಯಾಗಿರುವುದರಿಂದ ಕಡಲಿನಲ್ಲಿ ಭಾರೀ ಗಾತ್ರದ ಅಲೆಗಳು ಉಂಟಾಗಿರುವುದರಿಂದ ಕಡಲು ಬಿರುಸುಗೊಂಡು ಇನ್ನಷ್ಟು ಕಡಲ ಕೊರೆತ ಸಾಧ್ಯತೆ ಇದೆ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.
ಕಡಲ್ಕೊರೆತ ಸ್ಥಾನಕ್ಕೆ ಯಾವ ಅಧಿಕಾರಿಗಳು ಭೇಟಿ ನೀಡದಿರುವುದಕ್ಕೆ ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆ ಪಂಚಾಯತ್ ಸದಸ್ಯ ವೀರಭದ್ರ್ ಖಾರ್ವಿ, ಮಾಜಿ ಸದಸ್ಯ ನಾಗೇಶ್ ಖಾರ್ವಿ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.