ಕಡೂರು: ಮತ್ತೆ ಮೂವರಿಗೆ ಕೋವಿಡ್
Team Udayavani, Jul 20, 2020, 1:18 PM IST
ಕಡೂರು: ಭಾನುವಾರ ಕಡೂರು ಪಟ್ಟಣದಲ್ಲಿ ಎರಡು ಹಾಗೂ ಗ್ರಾಮಾಂತರ ಭಾಗವಾದ ಹರುವನಹಳ್ಳಿಯಲ್ಲಿ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಪಟ್ಟಣದ ಅನ್ನಪೂರ್ಣ ಚಿತ್ರಮಂದಿರದ ಹಿಂಭಾಗ ವಾರ್ಡ್ ನಂ. 8 ರಲ್ಲಿ ಸರ್ಕಾರಿ ನಿವೃತ್ತ ನೌಕರ (70) ಹಾಗೂ ಅವರ ಪತ್ನಿ (61) ಇಬ್ಬರಿಗೂ ಶುಕ್ರವಾರ ಕಡೂರು ಸಾರ್ವಜನಿಕರ ಆಸ್ಪತ್ರೆಯಲ್ಲಿ ಗಂಟಲು ದ್ರವನ್ನು ಪರೀಕ್ಷೆಗೆ ನೀಡಿದ್ದು ಭಾನುವಾರ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.
ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ 6 ಜನ ಬಂಧುಗಳನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು ಸೋಮವಾರ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುವುದಾಗಿ ತಾಲೂಕು ವೈದ್ಯಾಧಿ ಕಾರಿ ಡಾ| ರವಿಕುಮಾರ್ ತಿಳಿಸಿದರು. ಹರುವನಹಳ್ಳಿ ಗ್ರಾಮದ ತರಕಾರಿ ವ್ಯಾಪಾರಿ ಓರ್ವನಿಗೆ ಕೊರೊನಾ ಪತ್ತೆಯಾಗಿದ್ದು ಅವರ ಗಂಟಲು ದ್ರವವನ್ನು ಶುಕ್ರವಾರ ನೀಡಿದ್ದು ವರದಿ ಬಂದಿದೆ. ಪ್ರಾಥಮಿಕ ಸಂಪರ್ಕದ ಮಾಹಿತಿ ಇನ್ನೂ ದೃಢವಾಗಿಲ್ಲ. ಈ ಮೂರು ಜನರನ್ನು ಚಿಕ್ಕಮಗಳೂರಿನ ನಿಗದಿತ ಕೋವಿಡ್-19 ಆಸ್ಪತ್ರೆಯ ಐಸೋಲೇಶನ್ ವಾರ್ಡ್ಗೆ ವರ್ಗಾಯಿಸಲಾಗಿದೆ ಎಂಬ ಮಾಹಿತಿ ನೀಡಿದರು. ಇದರೊಂದಿಗೆ ಕಡೂರು ತಾಲೂಕಿನಲ್ಲಿ ಇದುವರೆಗೆ 33 ಸೋಂಕಿತರು ಪತ್ತೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.