ಪುಣೆ: ಲಾಕ್ಡೌನ್ ಉಲ್ಲಂಘನೆ 30 ಸಾವಿರ ಪ್ರಕರಣ
Team Udayavani, Jul 20, 2020, 3:07 PM IST
ಪುಣೆ, ಜು. 19: ಪಿಂಪ್ರಿ-ಚಿಂಚ್ವಾಡ್ ಪೊಲೀಸರು ಲಾಕ್‌ಡೌನ್ ಉಲ್ಲಂಘನೆಗೆ ಸಂಬಂಸಿದಂತೆ 30,504 ಪ್ರಕರಣಗಳನ್ನು ದಾಖಲಿಸಿಕೊಂಡು, 125 ಮಂದಿಯನ್ನು ಬಂಧಿಸಿದ್ದಾರೆ.
ಜಿಲ್ಲಾಡಳಿತ 10 ದಿನಗಳ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ಪುಣೆ ಪೊಲೀಸರು ಸೋಮವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ಧ 1,613 ಪ್ರಕರಣಗಳನ್ನು ದಾಖಲಿಸಿದ್ದಾರೆ. ಒಟ್ಟಾರೆಯಾಗಿ ಪುಣೆ ಮಹಾನಗರ ಪಾಲಿಕೆ ಮತ್ತು ಪಿಂಪ್ರಿ-ಚಿಂಚ್ವಾಡ್ ಮಹಾನಗರ ಪಾಲಿಕೆಯ ಒಳಪಟ್ಟಂತೆ ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ 32,117 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಗಣನೆಗೆ ತೆಗೆದುಕೊಂಡು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಪಿಸಿಎಂಸಿ ಪೊಲೀಸ್ ಆಯುಕ್ತ ಸಂದೀಪ್ ಬಿಷ್ಣೋಯ್ ಆದೇಶ ಹೊರಡಿಸಿದ್ದಾರೆ. ಲಾಕ್ ಡೌನ್ ಅವ ಯಲ್ಲಿ ಮನೆಯೊಳಗೆ ಇರಲು ನಾವು ನಿವಾಸಿಗಳಿಗೆ ಸಲಹೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಪಿಸಿಎಂಸಿ ಪೊಲೀಸರು 1.38 ಲಕ್ಷ ರೂ.ಗಳ ದಂಡವನ್ನು ವಸೂಲಿ ಮಾಡಿರುವುದಲ್ಲದೆ, ಇಲ್ಲಿಯವರೆಗೆ 2,611 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದ್ದು, ನಾಗರಿಕರಿಗೆ ಜೀವನವನ್ನು ಸುರಕ್ಷಿತವಾಗಿಸುವ ಉದ್ದೇಶದಿಂದ ಕಠಿನ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ (ಅಪರಾಧ) ಬಚ್ಚನ್ ಸಿಂಗ್ ಹೇಳಿದ್ದಾರೆ. ನಾವು ನಾಗರಿಕರಿಂದ ಉತ್ತಮ ಸಹಕಾರವನ್ನು ಪಡೆದಿದ್ದೇವೆ. ವೈದ್ಯಕೀಯ ಮತ್ತು ಇತರ ತುರ್ತು ಸಂದರ್ಭಗಳಲ್ಲಿ ಹೊರತುಪಡಿಸಿ ಅವರು ತಮ್ಮ ನಿವಾಸದಿಂದ ಹೊರಬರಬಾರದು ಎಂದು ಎಲ್ಲರಿಗೂ ಮನವಿ ಮಾಡುತ್ತೇವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.